ಹೊಸದಿಲ್ಲಿ: ದೆಹಲಿ ಪೊಲೀಸರ ಕಾರ್ಯಾಚರಣೆಯಿಂದ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ನ ಏಳು ಮಂದಿ ಶಂಕಿತ ಶೂಟರ್‌ಗಳ ಬಂಧನವಾಗಿದೆ.
ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಅಕ್ಟೋಬರ್ 12 ರಂದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದೀಕಿ ಹತ್ಯೆಯ ಹೊಣೆ ಹೊತ್ತು, ಬಿಷ್ಟೋಯಿ ಗ್ಯಾಂಗ್‌ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಘಟನೆ ನಡೆದು ಹಲವು ದಿನಗಳ ನಂತರ ಮಹತ್ತರ ಬೆಳವಣಿಗೆಯನ್ನು ಕಂಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಹಾಗೂ ಇತರ ರಾಜ್ಯಗಳಿಂದ ಏಳು ಮಂದಿಯನ್ನು ಬಂಧಿಸಲಾಗಿದೆ. ಈ ಬಂಧಿತ ಆರೋಪಿಗಳಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಒಳಪಡಿಸಲಾಗಿದ್ದು, ಸಿದ್ದಿಕಿ ಹತ್ಯೆಗೂ ಈ ಆರೋಪಿಗಳಿಗೂ ಏನಾದರೂ ಸಂಬಂಧವಿದೆಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





