pakisthan
ಬುನೇರ್(ಪಾಕಿಸ್ತಾನ): ವಾಯುವ್ಯ ಪಾಕಿಸ್ತಾನದ ಬುನೇರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.
ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ ನೆಲಸಮವಾದ ಮನೆಗಳ ಅವಶೇಷಗಳಿಂದ ಕಳೆದ ರಾತ್ರಿ ಮತ್ತೆ 63 ಶವಗಳನ್ನು ಹೊರ ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಕ್ಕೇರಿದ ಪ್ರವಾಹದ ಹರಿವು ನೂರಾರು ಬಂಡೆಗಳನ್ನು ಮತ್ತು ಟನ್‍ಗಟ್ಟಲೆ ಕೆಸರನ್ನು ಹೊತ್ತು ತಂದಿರುವ ಪರಿಣಾಮ ಈ ಅನಾಹುತ ಸಂಭವಿಸಿದೆ.
ಶುಕ್ರವಾರ ಮೇಘಸ್ಫೋಟ ಮತ್ತು ಪ್ರವಾಹದಿಂದ ಧ್ವಂಸವಾದ ಖೈಬರ್ ಪಖ್ತೂಂಖ್ವಾ ಪ್ರಾಂತ್ಯದ ಭಾಗಗಳಲ್ಲಿ ಒಂದಾದ ಬುನೇರ್‌ನಲ್ಲಿ ನೂರಾರು ರಕ್ಷಣಾ ಕಾರ್ಯಕರ್ತರು ಇನ್ನೂ ಬದುಕುಳಿದಿರುವವರಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತುರ್ತು ಸೇವೆಗಳ ವಕ್ತಾರ ಮೊಹಮದ್ ಸುಹೈಲ್ ತಿಳಿಸಿದ್ದಾರೆ. ಘಟನೆಯಲ್ಲಿ ನೂರಾರು ಮನೆಗಳು ಕೊಚ್ಚಿಹೋಗಿವೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…