ದೇಶ- ವಿದೇಶ

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ.

ಕೋಶಿ ನದಿಯ ಪ್ರಮುಖ ಉಪನದಿಯಾದ ಲ್ಹೆಂಡೆ ಖೋಲಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿದ್ದ ಅಣೆಕಟ್ಟು ನೀರಿನ ಒತ್ತಡಕ್ಕೆ ತಡೆಯಲಾರದೆ ಒಮ್ಮೆಲೇ ಒಡೆದಿದೆ. ಇದರಿಂದಾಗಿ ಸಂಗ್ರಹವಾಗಿದ್ದ ಲಕ್ಷಾಂತರ ಲೀಟರ್ ನೀರು ಮತ್ತು ಕೆಸರು ಒಟ್ಟಿಗೆ ಅತ್ಯಂತ ವೇಗವಾಗಿ ಕೆಳಭಾಗಕ್ಕೆ ನುಗ್ಗಿ ಜಲಪ್ರಳಯವನ್ನು ಸೃಷ್ಟಿಸಿದೆ. ಪ್ರವಾಹ ಪೀಡಿತ ದುರಂತ ವಲಯಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ನೇಪಾಳ ಸೇನೆಯು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಸದ್ಯ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯು ಬರೋಬ್ಬರಿ 15 ಹೆಲಿಕಾಪ್ಟರ್‌ಗಳನ್ನು ಕಣಕ್ಕಿಳಿಸಿದೆ ಎಂದು ನೇಪಾಳ ಸೇನೆಯ ಬ್ರಿಗೇಡಿಯರ್ ಜನರಲ್ ರಾಜಾ ರಾಮ್ ಬಸ್ನೆಟ್ ಅವರು ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಹಿಮಕುಸಿತವೇ ಈ ಇಡೀ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಪರ್ವತ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಹಿಮ ಮತ್ತು ಬಂಡೆಗಳು ಒಟ್ಟಿಗೆ ಕುಸಿದು ಬಿದ್ದ ಪರಿಣಾಮ, ನದಿಗಳಲ್ಲಿ ದಿಢೀರನೆ ನೀರಿನ ಮಟ್ಟ ಏರಿಕೆಯಾಗಿ ಮಹಾಪ್ರವಾಹ ಸೃಷ್ಟಿಯಾಗಿದೆ. ಈ ಆಕಸ್ಮಿಕ ಜಲಸ್ಫೋಟವು ನೇಪಾಳದ ಹಲವು ಭಾಗಗಳನ್ನು ಸಂಪೂರ್ಣವಾಗಿ ಆಪೋಶನ ತೆಗೆದುಕೊಂಡಿದ್ದು, ಭೀಕರ ಪ್ರವಾಹದ ಅಲೆಗಳಿಗೆ ಸಿಲುಕಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಹತ್ತಾರು ಹಳ್ಳಿಗಳು ಜಲಾವೃತ
ಪ್ರವಾಹದ ತೀವ್ರತೆ ಎಷ್ಟಿತ್ತೆಂದರೆ, ನದಿ ಪಾತ್ರದ ಸುತ್ತಮುತ್ತಲಲ್ಲಿದ್ದ ಹತ್ತಾರು ಹಳ್ಳಿಗಳು ಜಲಾವೃತಗೊಂಡಿದ್ದು, ವ್ಯಾಪಕ ಹಾನಿ ಸಂಭವಿಸಿದೆ. ಪ್ರಮುಖ ಸಂಪರ್ಕ ರಸ್ತೆಗಳು ಕಡಿದುಹೋಗಿದ್ದು, ಸೇತುವೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ದುರಂತ ಸಂಭವಿಸಿದಾಗಿನಿಂದ ನೂರಾರು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದು, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ನದಿಗಳ ಆರ್ಭಟಕ್ಕೆ ಸಿಲುಕಿದ ಹಳ್ಳಿಗಳ ಮೂಲಸೌಕರ್ಯಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ.

ನಾಪತ್ತೆಯಾದ ಪ್ರವಾಸಿಗರು
ಕೈಲಾಶ ಮಾನಸರೋವರ ಯಾತ್ರೆಗಾಗಿ ಟಿಬೆಟ್‌ಗೆ ಹೊರಟಿದ್ದ ಸುಮಾರು 400 ಯಾತ್ರಾರ್ಥಿಗಳು ನೇಪಾಳದಲ್ಲಿ ಸಂಭವಿಸಿದ ಭೀಕರ ಆಕಸ್ಮಿಕ ಪ್ರವಾಹದ ಕಾರಣದಿಂದಾಗಿ ಸಂಪರ್ಕ ಕಳೆದುಕೊಂಡಿದ್ದಾರೆ. ನಾಪತ್ತೆಯಾಗಿರುವವರಲ್ಲಿ ಹೆಚ್ಚಿನವರು ಭಾರತೀಯ ಮೂಲದವರಾಗಿದ್ದಾರೆ ಎಂದು ವರದಿಯಾಗಿದೆ. ನೇಪಾಳದ ರಸುವಾ ಜಿಲ್ಲೆಯ ರಸುವಾಗಢಿ ಪ್ರದೇಶದ ಸಮೀಪ ನುಗ್ಗಿದ ಮಹಾಪ್ರವಾಹವು ಅಲ್ಲಿನ ಪ್ರಮುಖ ರಸ್ತೆಗಳು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ರಸ್ತೆಗಳು ಕೊಚ್ಚಿಹೋಗಿರುವುದರಿಂದ ಇಡೀ ಪ್ರದೇಶವು ಹೊರಜಗತ್ತಿನಿಂದ ಕಡಿತಗೊಂಡಿದ್ದು, ಯಾತ್ರಾರ್ಥಿಗಳನ್ನು ಪತ್ತೆಹಚ್ಚಲು ಮತ್ತು ಅವರ ಪ್ರಸ್ತುತ ಪರಿಸ್ಥಿತಿಯನ್ನು ತಿಳಿಯಲು ರಕ್ಷಣಾ ಪಡೆಗಳು ತೀವ್ರ ಪ್ರಯತ್ನ ನಡೆಸುತ್ತಿವೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

14 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

15 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

16 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

17 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

20 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

20 hours ago