ಡೆಹ್ರಾಡೂನ್: ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ರಸ್ತೆಗಳು, ಮನೆಗಳು ಮತ್ತು ಅಂಗಡಿಗಳು ಹಾನಿಗೀಡಾಗಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.
ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರೆದಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆ ಮತ್ತು ಬಿರುಗಾಳಿಯೊಂದಿಗೆ ಹೆಚ್ಚುವರಿ ಮಳೆಯಾಗುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ತಡರಾತ್ರಿ ಡೆಹ್ರಾಡೂನ್‌ನ ಷಷ್ಠಧಾರದಲ್ಲಿ ಭಾರೀ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿದೆ. ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನಾನು ಈ ನಿಟ್ಟಿನಲ್ಲಿ ಸ್ಥಳೀಯ ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಅಕ್ಟೋಬರ್.9ರಿಂದ ಹಾಸನಾಂಬ ಜಾತ್ರಾ ಮಹೋತ್ಸವ
ಉತ್ತರಾಖಂಡದಲ್ಲಿ ಭಾರೀ ಮಳೆಯ ನಂತರದ ಪರಿಸ್ಥಿತಿಯ ಬಗ್ಗೆ ಧಾಮಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಎಕ್ಸ್‌ನಲ್ಲಿ ತಿಳಿಸಿದೆ.
ಡೆಹ್ರಾಡೂನ್ ಮತ್ತು ತೆಹ್ರಿ ಗರ್ವಾಲ್‌ಗೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಗಂಟೆಗೆ 15 ಮಿ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಸಹಿತ ಮಳೆ ಮತ್ತು ಗಂಟೆಗೆ 87 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಈ ತೀವ್ರ ಹವಾಮಾನ ಪರಿಸ್ಥಿತಿಗಳು ದಿನವಿಡೀ ಮುಂದುವರಿಯುವ ನಿರೀಕ್ಷೆಯಿದ್ದು, ಮತ್ತಷ್ಟು ಹಾನಿ ಮತ್ತು ಅಡಚಣೆಗಳು ಉಂಟಾಗುವ ಸಾಧ್ಯತೆ ಇದೆ.





