ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಟೆಕ್ಸಾಸ್, ಲೂಯಿಸಿಯಾನ ಹಾಗೂ ನ್ಯೂಯಾರ್ಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾವುಗಳು ಸಂಭವಿಸಿದೆ. ಭಾರೀ ಹಿಮಪಾತ ಹಾಗೂ ಬಿರುಗಾಳಿಯಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಸುಮಾರು 30,000ಕ್ಕೂ ಹೆಚ್ಚು ವಿಮಾನ ಪ್ರಯಾಣದ ಮೇಲೆ ಪರಿಣಾಮ ಬೀರಿದ್ದು, ಸಾವಿರಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಇನ್ನು ನ್ಯೂಯಾರ್ಕ್, ಬೋಸ್ಟನ್ ಮತ್ತು ಫಿಲಡೆಲ್ಟಿಯಾದಂತಹ ಪ್ರಮುಖ ನಗರಗಳಲ್ಲಿ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ಆನ್‌ಲೈನ್ ತರಗತಿಗಳಿಗೆ ಸೂಚನೆ ನೀಡಲಾಗಿದೆ.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…