ದೇಶ- ವಿದೇಶ

ಈಶಾ ಫೌಂಡೇಷನ್‌ ಶಾಲೆಯಲ್ಲಿ ಮಗನ ಮೇಲೆ ಲೈಂಗಿಕ ಕಿರುಕುಳ: ಪೋಷಕರ ಗಂಭೀರ ಆರೋಪ

ಹೈದರಾಬಾದ್:‌ ಜಗ್ಗಿ ವಾಸುದೇವ್‌ ಆಧ್ಯತ್ಮೀಕ ಕೇಂದ್ರ ಈಶಾ ಫೌಂಡೇಷನ್‌ ನಡೆಸುತ್ತಿರುವ ಶಾಲೆಯಲ್ಲಿ ತಮ್ಮ ಮಗನ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಈಶಾ ಫೌಂಡೇಚನ್‌ ಒಡೆತನದಲ್ಲಿರಿವ ಶಿಕ್ಷಣ ಸಂಸ್ಥೆಗಳು ನಿರಂಕುಶವಾಗಿ ನಡೆದುಕೊಳ್ಳುತ್ತಿವೆ ಎಂದು ಆಂಧ್ರಪ್ರದೇಶದ ರಾಜಂಡ್ರಿಯ ದಂಪತಿ ಸತ್ಯ ನರೇಂದ್ರ ಮತ್ತು ಯಾಮಿನಿ ರಾಗಣಿ ದೂರಿದ್ದಾರೆ.

ಈಶಾ ಸ್ಕೊಲ್‌ನಲ್ಲಿ ಬಾಲಕನೊಬ್ಬ ಕಳೆದ 3 ವರ್ಷಗಳಿಂದ ತಮ್ಮ ಮಗನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಶಾಲೆಯ ಆಡಳಿತ ಮಂಡಳಿ ಗಮನಕ್ಕೆ ತಂದರು ಕೂಡ ಯಾವುದೇ ರೀತಿಯ್ರ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಸ್ವತಃ ರಾಜಂಡ್ರಿಯ ದಂಪತಿ ಸತ್ಯ ನರೇಂದ್ರ ಮತ್ತು ಯಾಮಿನಿ ರಾಗಣಿಯು ಈಶಾ ಫೌಂಡೇಷನ್‌ನ ಮಾಜಿ ಸ್ವಯಂಸೇವಕರಾಗಿದ್ದಾರೆ. ಐದುನೈದು ವರ್ಷಗಳಿಂದ ಸ್ವಯಂಸೇವಕರಾಗಿದ್ದ ಅವರು ಇತ್ತೀಚೆಗೆ ಈಶಾ ಫೌಂಡೇಷನ್‌ನಿಂದ ಹೊರನಡೆದಿರುವುದಾಗಿ ಹೇಳಿಕೊಂಡಿದ್ದಾರೆ.

ಈಶಾ ಫೌಂಡೇಷನ್‌ ಶಾಲೆಗಳಲ್ಲಿ ಕೆಲವು ಆಚರಣೆಗಳಲ್ಲಿ ಹದಿಹರೆಯದ ಬಾಲಕಿಯರು ಕೆಲವು ಆಚರಣೆಗಳಲ್ಲಿ ಬರಿ ಎದೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೆ 8 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದಂಪತಿ ಅಲ್ಲಿನ ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

10 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

10 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

10 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

10 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

11 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

11 hours ago