ನವದೆಹಲಿ: ಪ್ರಸ್ತಕ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ದರವನ್ನು ಆರ್‌ಬಿಐ ಶೇ.7.2 ರಿಂದ ಶೇ.6.6ಕ್ಕೆ ಇಳಿಕೆ ಮಾಡಿದೆ ಎಂದು ಆರ್‌ಬಿಐ ಗರ್ವನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಡಿ.6) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದು 2023ರ ಹಣಕಾಸು ವರ್ಷದಂತೆ ಮುಂದುವರೆದುಕೊಂಡು ಹೋಗುತ್ತದೆ. ಆದರೆ ಶೇ.6.6ರಲ್ಲೇ ರೆಪೋ ದರ ಮುಂದುವರಿಸಲು ಹಣಕಾಸು ನೀತಿ ಸಮಿತಿಯು 4:2 ಬಹುಮತದ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.
ಜಾಗತಿಕ ಆರ್ಥಿಕತೆಯೂ ವಿಕಸನಗೊಳ್ಳುತ್ತಿರುವ ಈ ವೇಳೆಯಲ್ಲಿ ಭಾರತದ ಆರ್ಥಿಕತೆ ಉತ್ತಮ ಸ್ಥಾನದಲ್ಲಿದೆ. ಆದರೆ ವಿಕಸನಗೊಳ್ಳುತ್ತಿರುವ ಸ್ಥೂಲ ಆರ್ಥಿಕತೆ ಹಾಗೂ ಹಣಕಾಸಿನ ಬೆಳವಣಿಗೆಗಳ ವಿವರದ ಮೌಲ್ಯಮಾಪನದ ಬಳಿಕ ಹಣಕಾಸು ನೀತಿಯು 4:2ರ ಬಹುಮತದಿಂದ ರೆಪೋ ದರದಲ್ಲಿ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಸ್ಟ್ಯಾಂಡರ್ಡ್ ಠೇವಣಿ ಸೌಲಭ್ಯ ದರವು 6.25ರಲ್ಲೇ ಉಳಿದಿದೆ. ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ ದರ 6.75ರಷ್ಟಿದೆ ಎಂದು ಹೇಳಿದ್ದಾರೆ.
ಇನ್ನು ಪ್ರಸ್ತಕ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ.4.8ಕ್ಕೆ ಏರಿಕೆಯಾಗಬಹುದು. ಈ ಹಿಂದೆ ಶೇ.4.5 ರಷ್ಟು ಎಂದಷ್ಟೇ ಮಾತ್ರ ಅಂದಾಜಿಸಲಾಗಿತ್ತು. ಅಲ್ಲದೇ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಾಲ ನೀಡಲು ಬ್ಯಾಂಕ್‌ಗಳ ಬಳಿ ಅಧಿಕ ಹಣ ಲಭ್ಯವಾಗುವ ರೀತಿಯಲ್ಲಿ ಪಡೆಯಲು ಆರ್‌ಬಿಐ ನಗದು ಮೀಸಲು ಅನುಪಾತವನ್ನು ಶೇ.4.5 ರಿಂದ ಶೇ.4ಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಈ ನಿರ್ಧಾರದಿಂದ ಬ್ಯಾಂಕ್‌ಗಳಿಗೆ 1.16ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲು ಹಾಗೂ ಸಾಲ ನೀಡುವ ಸಾಮರ್ಥ್ಯವನ್ನು ಸುಧಾರಿಸಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…