ದೇಶ- ವಿದೇಶ

ಆರ್‌ಬಿಐನಿಂದ ಜಿಡಿಪಿ ಬೆಳವಣಿಗೆ ಅಂದಾಜು ದರ ಶೇ.6.6ಕ್ಕೆ ಇಳಿಕೆ : ಶಕ್ತಿಕಾಂತ್‌ ದಾಸ್‌

ನವದೆಹಲಿ: ಪ್ರಸ್ತಕ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ದರವನ್ನು ಆರ್‌ಬಿಐ ಶೇ.7.2 ರಿಂದ ಶೇ.6.6ಕ್ಕೆ ಇಳಿಕೆ ಮಾಡಿದೆ ಎಂದು ಆರ್‌ಬಿಐ ಗರ್ವನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.6) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದು 2023ರ ಹಣಕಾಸು ವರ್ಷದಂತೆ ಮುಂದುವರೆದುಕೊಂಡು ಹೋಗುತ್ತದೆ. ಆದರೆ ಶೇ.6.6ರಲ್ಲೇ ರೆಪೋ ದರ ಮುಂದುವರಿಸಲು ಹಣಕಾಸು ನೀತಿ ಸಮಿತಿಯು 4:2 ಬಹುಮತದ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.

ಜಾಗತಿಕ ಆರ್ಥಿಕತೆಯೂ ವಿಕಸನಗೊಳ್ಳುತ್ತಿರುವ ಈ ವೇಳೆಯಲ್ಲಿ ಭಾರತದ ಆರ್ಥಿಕತೆ ಉತ್ತಮ ಸ್ಥಾನದಲ್ಲಿದೆ. ಆದರೆ ವಿಕಸನಗೊಳ್ಳುತ್ತಿರುವ ಸ್ಥೂಲ ಆರ್ಥಿಕತೆ ಹಾಗೂ ಹಣಕಾಸಿನ ಬೆಳವಣಿಗೆಗಳ ವಿವರದ ಮೌಲ್ಯಮಾಪನದ ಬಳಿಕ ಹಣಕಾಸು ನೀತಿಯು 4:2ರ ಬಹುಮತದಿಂದ ರೆಪೋ ದರದಲ್ಲಿ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಸ್ಟ್ಯಾಂಡರ್ಡ್‌ ಠೇವಣಿ ಸೌಲಭ್ಯ ದರವು 6.25ರಲ್ಲೇ ಉಳಿದಿದೆ. ಮಾರ್ಜಿನಲ್‌ ಸ್ಟ್ಯಾಂಡಿಂಗ್‌ ಫೆಸಿಲಿಟಿ ದರ 6.75ರಷ್ಟಿದೆ ಎಂದು ಹೇಳಿದ್ದಾರೆ.

ಇನ್ನು ಪ್ರಸ್ತಕ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ.4.8ಕ್ಕೆ ಏರಿಕೆಯಾಗಬಹುದು. ಈ ಹಿಂದೆ ಶೇ.4.5 ರಷ್ಟು ಎಂದಷ್ಟೇ ಮಾತ್ರ ಅಂದಾಜಿಸಲಾಗಿತ್ತು. ಅಲ್ಲದೇ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಾಲ ನೀಡಲು ಬ್ಯಾಂಕ್‌ಗಳ ಬಳಿ ಅಧಿಕ ಹಣ ಲಭ್ಯವಾಗುವ ರೀತಿಯಲ್ಲಿ ಪಡೆಯಲು ಆರ್‌ಬಿಐ ನಗದು ಮೀಸಲು ಅನುಪಾತವನ್ನು ಶೇ.4.5 ರಿಂದ ಶೇ.4ಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಈ ನಿರ್ಧಾರದಿಂದ ಬ್ಯಾಂಕ್‌ಗಳಿಗೆ 1.16ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲು ಹಾಗೂ ಸಾಲ ನೀಡುವ ಸಾಮರ್ಥ್ಯವನ್ನು ಸುಧಾರಿಸಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

2 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

2 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

2 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

2 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

2 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

2 hours ago