ತಿರುವನಂತಪುರ: ನನ್ನ ಲೇಖನದಲ್ಲಿ ನಾನು ಕೇರಳದ ಸಿಪಿಐ ನೇತತ್ವದ ಸರ್ಕಾರವನ್ನು ಹೊಗಳಿಲ್ಲ. ಬದಲಿಗಡ ನವೋದ್ಯಮ ಕ್ಷೇತ್ರದಲ್ಲಿನ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ ಎಂದು ಸಂಸದ ಶಶಿ ತರೂರ್ ಸ್ಪಷ್ಟನೆ ನೀಡಿದ್ದಾರೆ.
ತಿರುವಂತಪುರದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಆಂಗ್ಲ ದಿನಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇರಲಿಲ್ಲ. ಕೇರಳದ ಉದ್ಯಮಶೀಲತೆ ಹಾಗೂ ನಾವೀನ್ಯತೆಯ ಬೆಳವಣಿಗೆಯ ಬಗ್ಗೆ ಪ್ರತಿಪಾದಿಸಿದ್ದೇನೆ ಅಷ್ಟೇ. ರಾಜ್ಯದ ಅಭಿವದ್ಧಿಯನ್ನು ಎತ್ತಿ ಹಿಡಿಯುವ ಪ್ರಯತ್ನವನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.
ನಾನು ಗ್ಲೋಬಲ್ ಸ್ಟಾರ್ಟ್‌ಅಪ್ ಇಕೊಸಿಸ್ಟಂ 2024 ವರದಿ ಆಧರಿಸಿ ನಾನು ಲೇಖನವನ್ನು ಬರೆದಿದ್ದೇನೆ. ಕೇರಳವು 18 ತಿಂಗಳಲ್ಲಿ 1.7 ಶತಕೋಟಿ ಅಮೆರಿಕನ್ ಡಾಲ್ ಹೂಡಿಕೆಯನ್ನು ಆಕರ್ಷಸಿದೆ ಎಂದು ವರದಿಯಲ್ಲಿದೆ. ಅಲ್ಲದೇ ಕೇರಳದಲ್ಲಿನ ಒಟ್ಟಾರೆ ಕೈಗಾರಿಕಾ ವಾತಾವರಣ ಎಂದು ನಂಬುವುದಿಲ್ಲ. ಕೇರಳ ಈಗಲೂ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಶೇ.80 ರಷ್ಟು ಸಾರ್ವಜನಿಕ ಉದ್ದಿಮೆಗಳು ನಷ್ಟದಲ್ಲಿವೆ ಎಂದು ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಮಾಜಿ ಸಿಎಂ ಉಮ್ನನ್ ಚಾಂಡಿ ಅವರು ರಾಜ್ಯದ ಅಡಿಪಾಯ ಹಾಕಿದರು. ಅವರೇ ಸ್ಟಾರ್ಟ್‌ಅಪ್ ವಿಲ್ಲೇಜ್ ಮತ್ತು ಸ್ಟಾರ್ಟ್‌ಅಪ್ ಮಿಷನ್ ಸೇರಿದಂತೆ ಅನೇಕ ಉಪಕ್ರಮಗಳನ್ನು ಪ್ರಾರಂಭಿಸಿದು. ಆದರೆ ಈಗಿನ ಸರ್ಕಾರ ಅದನ್ನು ಅಭಿವೃದ್ಧಿ ಪಡಿಸಿ ಮುನ್ನಡೆಸಿಕೊಂಡು ಹೋಗುತ್ತಿದೆ ಎಂದು ತಿಳಿಸಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…