ದೇಶ- ವಿದೇಶ

ಶೀಷ್‌ ಮಹಲ್‌ ವಿವಾದ: ಕೇಂದ್ರ ಲೋಕೋಪಯೋಗಿ ಇಲಾಖೆಗೆ ತನಿಖೆ ನಡೆಸುವಂತೆ ಆದೇಶಿಸಿದ ಕೇಂದ್ರ ಜಾಗೃತ ಆಯೋಗ

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರ ಅಧಿಕೃತ ನಿವಾಸವನ್ನು ಎಂಟು ಎಕರೆ ವಿಸ್ತೀರ್ಣದಲ್ಲಿ ಐಷಾರರಾಮಿ ಮಹಲಾಗಿ ಪರವರ್ತಿಸಲು ಕಟ್ಟಡ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಜಾಗೃತ ಆಯೋಗ ವಿವರವಾದ ತನಿಖೆಗೆ ಆದೇಶ ನೀಡಿದೆ.

ಬಿಜೆಪಿ ನಾಯಕ ವಿಜೇಂದರ್‌ ಗುಪ್ತಾ ಅವರು 2024ರರ ಅಕ್ಟೋಬರ್‌ 14 ರಂದು ಕೇಂದ್ರ ಜಾಗೃತ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಐಷಾರಾಮಿ ಮತ್ತು ನವೀಕರಣದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆಗೆ ತಿಳಿಸಿದೆ.

ಕೇಂದ್ರ ಜಾಗೃತ ಆಯೋಗ ಶೀಷ್‌ ಮಹಲ್‌ ವಿವಾದದ ದೂರರನ್ನು 2024ರ ನವೆಂಬರ್‌ 14ರಂದು ಅಗತ್ಯ ಕ್ರಮಕ್ಕಾಗಿ ಔಪಚಾರಿಕವಾಗಿ ಸಿಪಿಡಬ್ಲ್ಯೂಡಿಗೆ ರವಾನಿಸಲಾಗಿತ್ತು. ಇದನ್ನು ಡಿಸೆಂಬರ್‌ 24 ರಂದು ಆರಂಭಿಕ ವಿಚಾರಣೆಯ ಬಳಿಕ ಸಿಪಿಡಬ್ಲ್ಯೂಡಿ ಕೇಂದ್ರ ಜಾಗೃತ ಆಯೋಗಕ್ಕೆ ವಾಸ್ತವಿಕ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ಇದೀಗ ಫೆಬ್ರವರಿ.13 ರಂದು ವರದಿಯನ್ನು ಪರಿಶೀಲಿಸಿದ ನಂತರ ಕೇಂದ್ರ ಜಾಗೃತ ಆಯೋಗ ಸಿಎಂ ನಿವಾಸದ ನವೀಕರಣ ಹಾಗೂ ಐಷಾರಾಮಿ ಸೇರ್ಪಡೆಗಳ ವೆಚ್ಚದ ಕುರಿತು ವಿವರವಾದ ತನಿಖೆ ನಡೆಸುವಂತೆ ಸೂಚಿಸಿದೆ.

ದೂರಿನಲ್ಲಿ ಏನಿದೆ?

ದೆಹಲಿಯ ರಾಜ್‌ಪುರ ರಸ್ತೆಯಲ್ಲಿರುವ ಪ್ಲಾಟ್ ಸಂಖ್ಯೆ 45 ಮತ್ತು 47 ಸೇರಿದಂತೆ ಸರ್ಕಾರಿ ಆಸ್ತಿಗಳನ್ನು ಹಿಂದೆ ಟೈಪ್-ವಿ ಫ್ಲಾಟ್‌ಗಳಾಗಿದ್ದು, ಅಲ್ಲಿ ಹಿರಿಯ ಅಧಿಕಾರಿಗಳು ಹಾಗೂ ನ್ಯಾಯಾಧೀಶರನ್ನು ಇರಿಸಲಾಗಿತ್ತು. ಅಲ್ಲದೇ ಫ್ಲಾಗ್‌ ಸ್ಟಾಪ್‌ ರಸ್ತೆಯಲ್ಲಿರುವ ಎರಡು ಬಂಗಲೆಗಳನ್ನು ಹೊಡೆದು ಹಾಕಿ ಹೊಸ ನಿವಾಸದಲ್ಲಿ ವಿಲೀನಗೊಳಿಸಲಾಗಿದೆ. ಜೊತೆಗೆ ಶೀಷ್‌ ಮಹಲ್‌ ನಿರ್ಮಾಣವೂ ನೆಲದ ವ್ಯಾಪ್ತಿ ಹಾಗೂ ನೆಲದ ವಿಸ್ತೀರ್ಣದ ಅನುಪಾತದ ಮಾನದಂಡಗಳನ್ನು ಉಲ್ಲಂಘಿಸಿದೆ. ಹೀಗಾಗಿ ಸರಿಯಾದ ವಿನ್ಯಾಸ ಯೋಜನೆ ಮತ್ತು ಅನುಮೋದನೆಗಳನ್ನು ಹೊಂದಿಲ್ಲ ಎಂದು ದೂರು ನೀಡಿದ್ದರು.

ಅರ್ಚನ ಎಸ್‌ ಎಸ್

Recent Posts

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

1 hour ago

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

1 hour ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಅರ್ಧ ಲೀಟರ್ ನೀರಿನ ಬಾಟಲಿ ಕೊರತೆ

ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…

1 hour ago

ಓದುಗರ ಪತ್ರ: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಯಾವಾಗ?

ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…

1 hour ago

ಓದುಗರ ಪತ್ರ: ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಿ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ವಿಶಾಲ್ ಸಿಂಗ್ ಎಂಬ ಬಡರೋಗಿಗಳ ಅನ್ನದಾತ

ಪಂಜುಗಂಗೊಳ್ಳಿ  ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…

1 hour ago