ದೇಶ- ವಿದೇಶ

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು

ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ ದುರಂತ ಸಂಭವಿಸಿದೆ. ಸಿಂಗಾಪುರಕ್ಕೆ ಹೊರಟಿದ್ದ ಪನಾಮ ದೇಶದ ಧ್ವಜದ ‘ಎಮ್‌ವಿ ಓಷನ್ ವಿನ್ನರ್’ ಹೆಸರಿನ ದೈತ್ಯ ಸರಕು ಹಡಗು ಬಂಗಾಳ ಕೊಲ್ಲಿಯಲ್ಲಿ ಮುಳುಗಡೆಯಾಗಿದೆ.

24 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಪನಾಮಾ ಧ್ವಜದ ಸರಕು ಸಾಗಣೆ ಹಡಗು ಶನಿವಾರ ಒಡಿಶಾ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲು ದೂರದಲ್ಲಿ ಬಂಗಾಳ ಕೊಲ್ಲಿಯಲ್ಲಿ ಮುಳುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂವಿ ಓಷನ್ ವಿನ್ನರ್ ಹೆಸರಿನ ಈ ಹಡಗು ಒಡಿಶಾದಿಂದ ಸಿಂಗಾಪುರಕ್ಕೆ 72,100 ಟನ್ ಕಬ್ಬಿಣದ ಅದಿರನ್ನು ಸಾಗಿಸುತ್ತಿತ್ತು. ಆಗಸ್ಟ್ 20ರಂದು ರಾತ್ರಿ 10.42ರ ಸುಮಾರಿಗೆ ಪಾರಾದೀಪ್ ಬಂದರಿನಿಂದ ಹಡಗು ಹೊರಟಿತ್ತು. ಹಡಗಿನಲ್ಲಿದ್ದ 24 ಸಿಬ್ಬಂದಿಯಲ್ಲಿ 20 ಮಂದಿ ಚೀನಾ, ಮೂವರು ಮ್ಯಾನ್ಮಾರ್ ಹಾಗೂ ಒಬ್ಬರು ಬಾಂಗ್ಲಾದೇಶದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬ್ಬಂದಿಯ ರಕ್ಷಣೆಗೆ ಭಾರತೀಯ ಕರಾವಳಿ ಪಡೆ ಹಾಗೂ ಭಾರತೀಯ ನೌಕಾಪಡೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಈವರೆಗೆ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ 22 ಮಂದಿ ನಾಪತ್ತೆಯಾಗಿದ್ದಾರೆ. ಹಡಗಿನೊಂದಿಗೆ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಶೋಧ ಮತ್ತು ರಕ್ಷಣಾ ನೆರವು ಕೋರಿ ಹಡಗು ನಿರ್ವಹಣೆಗೆ ಸಂಬಂಧಿಸಿದ ಕಂಪನಿಯೊಂದು ಬೆಳಗ್ಗೆ 11.48ರ ಸುಮಾರಿಗೆ ಶ್ರೀ ವಿಜಯಪುರಂನಲ್ಲಿರುವ ಭಾರತೀಯ ಕರಾವಳಿ ಪಡೆಯ ಸಾಗರ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಮಾಹಿತಿ ನೀಡಿತ್ತು. ರಾತ್ರಿ 8ರ ಸುಮಾರಿಗೆ ಎರಡು ರಕ್ಷಣಾ ತೆಪ್ಪಗಳಿಂದ ಇಬ್ಬರು ಬದುಕುಳಿದವರನ್ನು ಐಸೋಪೋಸ್ ಸಿಬ್ಬಂದಿ ರಕ್ಷಿಸಿದರು ಎಂದು ಕರಾವಳಿ ಪಡೆ ತಿಳಿಸಿದೆ. ಶೋಧ ಕಾರ್ಯಾಚರಣೆಗೆ ಭಾರತೀಯ ಕರಾವಳಿ ಪಡೆ ಮೂರು ಹಡಗುಗಳನ್ನು ನಿಯೋಜಿಸಿದೆ.

 

 

ಆಂದೋಲನ ಡೆಸ್ಕ್

Recent Posts

ರಷ್ಯಾದಲ್ಲಿ ಪ್ಲೇಗ್ ಪತ್ತೆಯಾಗಿಲ್ಲ: WHO ಸ್ಪಷ್ಟನೆ!

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…

15 hours ago

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…

15 hours ago

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…

16 hours ago

ಮೈಸೂರು ದಸರಾ: ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…

16 hours ago

ಓದುಗರ ಪತ್ರ: ‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ

‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…

16 hours ago

ಓದುಗರ ಪತ್ರ: ನೀಲಿಯೆಂದರೇನು?!

ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…

16 hours ago