ಚಂಡೀಗಢ: ಬೈಕ್ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ತಡರಾತ್ರಿ ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ. ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಮಂಗತ್ ಜೊತೆಗೆ 12 ವರ್ಷದ ಬಾಲಕನಿನೋರ್ವನಿಗೂ ಗುಂಡು ತಗುಲಿದೆ. ದಾಳಿಕೋರರು ಬೆನ್ನಟ್ಟಿದಾಗ ಮಂಗತ್ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಲು ಯತ್ನಿಸಿದರು. ಆದರೂ ಬೆನ್ನಟ್ಟಿ ಮತ್ತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…