ದೇಶ- ವಿದೇಶ

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು “ನಾವು ನಿಜಕ್ಕೂ ಆಘಾತಗೊಂಡಿದ್ದೇವೆ” ಎಂದು ಹೇಳಿದ್ದಾರೆ.

ಸಂಘರ್ಷದ ಬಗ್ಗೆ ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್‌, ಅಮೆರಿಕ-ಇಸ್ರೇಲ್ ಜಂಟಿ ದಾಳಿಗಳ ಬಳಿಕ ಕತಾರ್, ಸೌದಿ ಅರೇಬಿಯಾ, ಯುಎಇ, ಬಹ್ರೈನ್ ಮತ್ತು ಕುವೈತ್ ಸೇರಿದಂತೆ ಗಲ್ಫ್ ದೇಶಗಳ ಮೇಲೆ ಇರಾನ್ ಈ ರೀತಿಯಾಗಿ ದಾಳಿ ನಡೆಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

ತಮ್ಮ ಮೇಲಿನ ದಾಳಿಗೆ ಪ್ರತಿಯಾಗಿ ಇರಾನ್ ನಿರೀಕ್ಷೆಗಿಂತ ಹೆಚ್ಚು ದಾಳಿ ಮಾಡಿರುವುದಾಗಿ ಒಪ್ಪಿಕೊಂಡಿರುವ ಟ್ರಂಪ್‌, ನೆರೆ ರಾಷ್ಟ್ರಗಳ ಮೇಲೆ ದಾಳಿ ಮಾಡಬಾರದಿತ್ತು. ಇರಾನ್‌ ಗುರಿಯಾಗಿಸಿದ ಕೆಲವು ಕ್ಷಿಪಣಿಗಳು ಇತರ ಕೊಲ್ಲಿ ರಾಷ್ಟ್ರಗಳ ಮೇಲೆ ಅಪ್ಪಳಿಸಿವೆ ಎಂದು ವಿವರಿಸಿದ್ದಾರೆ.

ಕದನ ವಿರಾಮ ಸಾಧ್ಯತೆಗಳ ಬಗ್ಗೆಯೂ ಮಾತನಾಡಿರುವ ಟ್ರಂಪ್‌, ತಕ್ಷಣಕ್ಕೆ ಸಾಧ್ಯವಾಗದಿದ್ದರೂ ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ ಎಂದು ಇದೇ ವೇಳೆ ಹೇಳಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

28 mins ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

42 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

47 mins ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

54 mins ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

60 mins ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

1 hour ago