ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆಯ ಸಂದರ್ಭದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ಪೊಲೀಸರು ವಕೀಲರನ್ನು ಕೋರ್ಟ್‌ನಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ವಕೀಲ ಕಿಶೋರ್ ರಾಕೇಶ್ ಎಂಬುವವರಿಂದ ಈ ಕೃತ್ಯ ನಡೆದಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ : ಕೂಡಲೇ ನಾಗಮೋಹನ್ ದಾಸ್ ವರದಿ ಬಿಡುಗಡೆಯಾಗಲಿ: ವಕೀಲ ಅರುಣ್ ಕುಮಾರ್ ಆಗ್ರಹ
ಆರೋಪಿಯನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಅವರು ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಕಿರುಚಾಡಿದರು.
ಆರೋಪಿಯನ್ನು ತಕ್ಷಣವೇ ಬಂಧಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತಚಿತ್ತರಾಗಿದ್ದರು. ಘಟನೆ ನಡೆದ ಬಳಿಕವೂ ವಿಚಾರಣೆಯನ್ನು ಮುಂದುವರಿಸಿದರು.
ಈ ಬಗ್ಗೆ ಮಾತನಾಡಿದ ಅವರು, ಇದೆಲ್ಲದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರಲ್ಲ. ವಿಚಾರಣೆಯನ್ನು ಮುಂದುವರಿಸಿ ಎಂದು ಹೇಳಿದರು.





