Shubanshu Shukla in space experiment Update
ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದರು.
ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ನೀರು ಕರಡಿ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ತೆ ಈ ಪ್ರಯೋಗ ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರು ಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ.
ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ ಅವರ ಪ್ರಯೋಗಗಳು ಮುಂದುವರಿದಿದ್ದು, ವಿವಿಧ ಸಸಿಗಳ ಬೀಜಗಳು ಮೊಳಕೆಯೊಡೆಯಲು ಅನುವಾಗುವಂತೆ ನೀರನ್ನು ಹನಿಸಿದ್ದಾರೆ. ಬಾಹ್ಯಾಕಾಶ ಯಾನದ ವೇಳೆ ಸೂಕ್ಷ್ಮ ಗುರುತ್ವಾಕರ್ಷಣೆಯು ಸಸಿಗಳ ಬೆಳವಣಿಗೆ ಮೇಗೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿಯಲು ಈ ಅಧ್ಯಯನ ನಡೆಸಲಾಗುತ್ತಿದೆ.
ಇನ್ನು ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಐಎಸ್‌ಎಸ್‌ನ ಕಿಟಕಿ ಎಂದೇ ಕರೆಯಲಾಗುವ ಕಪೋಲಾ ರಂದ್ರದಿಂದ ಹೊರ ಪ್ರಪಂಚವನ್ನು ವೀಕ್ಷಿಸುತ್ತಿರುವ ಚಿತ್ರವನ್ನು ನಾಸಾ ಬಿಡುಗಡೆ ಮಾಡಿದೆ.
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…