Mysore
16
clear sky

Social Media

ಬುಧವಾರ, 10 ಡಿಸೆಂಬರ್ 2025
Light
Dark

ಭೂಮಿಯ ಮೇಲೆ ನಡೆಯಲು ಕಲಿಯುತ್ತಿರುವ ಶುಭಾಂಶು ಶುಕ್ಲಾ

Shubhamshu shukla

ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್ ಆದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ.

ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್.25 ರಂದು ಸ್ಪೇಸ್‍ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳು ಶುಕ್ಲಾ ಕೂಡ ಒಬ್ಬರಾಗಿದ್ದರು.‌

ಐಎಸ್‍ಎಸ್‍ನಲ್ಲಿ ಸುಮಾರು 18 ದಿನಗಳನ್ನು ಕಳೆದ ನಂತರ ಅವರು ಜುಲೈ.15ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದರು. ಶುಕ್ಲಾ ಅವರು ಮತ್ತೆ ನಡೆಯಲು ಪ್ರಯತ್ನಿಸುತ್ತಿರುವ ಮತ್ತು ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತಿರುವ ವೀಡಿಯೊವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಪುಟ್ಟ ಮಕ್ಕಳು ಆಗ ತಾನೆ ನಡೆಯುವುದನ್ನು ಕಲಿಯುತ್ತಿರುವಂತೆ ಇರುವ ದೃಶ್ಯ ವೀಡಿಯೋದಲ್ಲಿದೆ. ಶುಕ್ಲಾ ಅವರು ನಡೆಯಲು ಇಬ್ಬರು ಸಹಾಯ ಮಾಡುತ್ತಿದ್ದಾರೆ. ಬೇಗ ಚೇತರಿಸಿಕೊಳ್ಳಿ ಎಂದು ನನಗೆ ಅನೇಕರು ಸಂದೇಶ ಕಳುಹಿಸುತ್ತಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ನಿಮಗೆಲ್ಲರಿಗೂ ಧನ್ಯವಾದ ಎಂದಿದ್ದಾರೆ.

ಗುರುತ್ವಾಕರ್ಷಣೆ ಇಲ್ಲದ ವಾತಾವರಣಕ್ಕೆ ನನ್ನ ದೇಹ ಒಗ್ಗಿಕೊಂಡಿತ್ತು. ಈಗ ಗುರುತ್ವಾಕರ್ಷಣೆಗೆ ಮರಳಿದಾಗ, ಇಲ್ಲಿಗೆ ಮತ್ತೆ ಹೊಂದಿಕೊಳ್ಳಬೇಕು. ನನ್ನ ದೇಹ ಬಹುಬೇಗ ಭೂಮಿ ವಾತಾವರಣಕ್ಕೆ ಹೊಂದಿಕೊಳ್ಳುತ್ತಿರುವುದನ್ನು ಕಂಡು ನನಗೆ ಅಚ್ಚರಿಯಾಯಿತು ಎಂದು ಶುಕ್ಲಾ ತಿಳಿಸಿದ್ದಾರೆ. ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳು ವೈದ್ಯಕೀಯ ಮತ್ತು ಮರು-ಹೊಂದಾಣಿಕೆ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಇಂದಿನವರೆಗೆ ಕ್ವಾರಂಟೈನ್‍ನಲ್ಲಿ ಇದ್ದರು.

 

 

View this post on Instagram

 

A post shared by Shubhanshu Shukla (@gagan.shux)

 

Tags:
error: Content is protected !!