ದೇಶ- ವಿದೇಶ

ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ

ಕ್ಯಾಲಿಫೋರ್ನಿಯಾ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ.

ಶುಭಾಂಶು ಶುಕ್ಲಾ ಪೋಷಕರು ಲಕ್ನೋದಲ್ಲಿರುವ ಸಿಟಿ ಮಾಂಟೆಸರಿ ಶಾಲೆಯಲ್ಲಿ ಲೈವ್‌ ವೀಕ್ಷಿಸಿ ಈ ಖುಷಿಯ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.

ಶುಭಾಂಶು ಶುಕ್ಲಾ ಅವರು 18 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದು ಇದೀಗ ಹಿಂದಿರುಗಿದ್ದು, ಎಲ್ಲೆಡೆ ಸಂತಸ ಮನೆ ಮಾಡಿದೆ.

ಜುಲೈ.14ರಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ನಂತರ ತಂಡವು ಈಗ ಕ್ಯಾಲಿಫೋರ್ನಿಯಾದ ಸ್ಯಾನ್‌ ಡಿಯಾಗೋ ಕರಾವಳಿಯಲ್ಲಿ ಪೆಸಿಫಿಕ್‌ ಮಹಾಸಾಗರದಲ್ಲಿ  ಸ್ಲಾಶ್‌ಡೌನ್‌ ಮಾಡಿದೆ.

ಜೂನ್.‌25ರಂದು ಆಕ್ಸಿಯಂ-4 ಮಿಷನ್‌ ಮೂಲಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ಅಮೇರಿಕಾ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್‌, ಹಂಗೇರಿಯ ಟಿಬೋರ್‌ ಕಾಪು ಹಾಗೂ ಫೋಲೆಂಡ್‌ ಗಗನಯಾತ್ರಿ ಸ್ಲಾವೋಸ್ಜ್‌ ಉನ್ನಾನ್ಸ್ಕಿ ಅಂತರಿಕ್ಷ ಯಾನಕ್ಕೆ ತೆರಳಿದ್ದರು.

ಈಗ ಗಗನಯಾತ್ರಿಗಳಿಗೆ 7 ದಿನ ಪುನಶ್ಚೇತನ ಕಾರ್ಯಕ್ರಮ ನಡೆಸಲಾಗುತ್ತದೆ. ನಂತರ ಅವರು ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ.

ಆಂದೋಲನ ಡೆಸ್ಕ್

Recent Posts

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

29 mins ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

59 mins ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

1 hour ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

1 hour ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…

2 hours ago

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

3 hours ago