Mysore
33
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಕ್ತಪೂರ್ವಕ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಭಾವಪೂರ್ಣ ಸಂದೇಶ ಹಂಚಿಕೊಂಡಿದ್ದಾರೆ.

ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ನನ್ನ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ಸದಾ ನೆಲೆಸಿದ್ದಾರೆ ಎಂದು ಬಣ್ಣಿಸಿದ್ದಾರೆ.

ಇತರರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಶ್ರೀಗಳು, ನಿಜವಾದ ಶ್ರೇಷ್ಠತೆಯ ಸೇವೆಯಲ್ಲಿ ಅಡಗಿದೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಮಾತ್ಮಿಕ ಕ್ಷೇತ್ರಗಳಲ್ಲಿ ಅವರು ನೀಡಿದ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪನ್ನು ಮೂಡಿಸಿವೆ ಎಂದು ಶ್ಲಾಘಿಸಿದ್ದಾರೆ.

ಇಂದಿಗೂ ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ನಿರಂತರ ಪ್ರೇರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

Tags:
error: Content is protected !!