ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.
ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ 24 ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ಅಂಕಿತ ಹಾಕುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆಯೂ ದ್ರೌಪದಿ ಮುರ್ಮು ಅವರ ಬಳಿ ಸಿದ್ದರಾಮಯ್ಯ ಗಮನ ಸೆಳೆದಿದ್ದಾರೆ ಎನ್ನಲಾಗಿದೆ.
ಇಂದು ಸಂಜೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಹಲವು ಬೆಳವಣಿಗೆ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.