ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ ವ್ಯಾಪಾರ ಒಪ್ಪಂದʼಕ್ಕೆ ಸಹಿ ಹಾಕಲಾಯಿತು. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್ಲೇ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಒಪ್ಪಂದದಿಂದ ಭಾರತದ ಎಲ್ಲ ಉತ್ಪನ್ನಗಳಿಗೆ ನ್ಯೂಜಿಲೆಂಡ್ ಮಾರುಕಟ್ಟೆಯಲ್ಲಿ ಶೇ.100ರಷ್ಟು ಸುಂಕ ರಹಿತ ಪ್ರವೇಶದ ಜತೆಗೆ ಮುಂದಿನ 15 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ 20 ಬಿಲಿಯನ್ ಡಾಲರ್(1.88ಲಕ್ಷ ಕೋಟಿ) ಹೂಡಿಕೆ ಮಾಡಲು ನಿರ್ಧರಿಸಲಿದೆ. ಮೂಲಸೌಕರ್ಯ, ನವೀಕರಿಸಬಹುದಾದ ಇಂಧನ, ಕೃಷಿ, ತಂತ್ರಜ್ಞಾನ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ.
ಐಟಿ, ಎಂಜಿನಿಯರಿಂಗ್, ಆರೋಗ್ಯ ಕ್ಷೇತ್ರದ ನುರಿತ ವೃತ್ತಿಪರರು, ಜೊತೆಗೆ ಆಯುಷ್ ವೈದ್ಯರು, ಯೋಗ ಬೋಧಕರು, ಭಾರತೀಯ ಬಾಣಸಿಗರಿಗೆ ವಾರ್ಷಿಕ 5,000 ತಾತ್ಕಾಲಿಕ ಉದ್ಯೋಗ ವೀಸಾ ಮೀಸಲು. ವೀಸಾ ಅವಧಿ ಮೂರು ವರ್ಷಗಳವರೆಗೆ ಇರಲಿದೆ. ಭಾರತೀಯ ವಿದ್ಯಾರ್ಥಿಗಳು ವಾರಕ್ಕೆ 20 ಗಂಟೆ ಕೆಲಸ ಮಾಡಬಹುದು. STEM ಪದವೀಧರರಿಗೆ 3 ವರ್ಷ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ 4 ವರ್ಷ ಪೋಸ್ಟ್-ಸ್ಟಡಿ ವರ್ಕ್ ವೀಸಾ ಸಿಗಲಿದೆ.
ಯಾವ ಕ್ಷೇತ್ರಗಳಿಗೆ ಲಾಭ?
ಚರ್ಮ ಮತ್ತು ಪಾದರಕ್ಷೆ ಮೇಲಿನ ಶೇ.5ರಷ್ಟು ಸುಂಕ ರದ್ದಾಗಿದ್ದು, ಆಗ್ರಾ ಕೇಂದ್ರಕ್ಕೆ ದೊಡ್ಡ ಉತ್ತೇಜನ ಸಿಗಲಿದೆ. ಜವಳಿ ಮೇಲಿನ ಶೇ.10ರಷ್ಟು ಸುಂಕ ತೆರವಾದರೆ, ಔಷಧ ಕಂಪನಿಗಳಿಗೆ ಅನುಸರಣೆ ವೆಚ್ಚ ಕಡಿಮೆಯಾಗಲಿದೆ.
ಇತ್ತ ನ್ಯೂಜಿಲೆಂಡ್‌ನ ಉಣ್ಣೆ, ವೈನ್, ಮರ, ಕಲ್ಲಿದ್ದಲು, ಆವಕಾಡೊ, ಬ್ಲೂಬೆರ್ರಿಗಳಿಗೆ ಭಾರತದ ಮಾರುಕಟ್ಟೆ ತೆರೆಯಲಿದೆ. ಕಿವಿ, ಸೇಬು ಬೆಳೆ ಮತ್ತು ಜೇನು ಉತ್ಪಾದನೆಯಲ್ಲಿ ಭಾರತೀಯ ರೈತರಿಗೆ ಸಹಕಾರ ನೀಡಲಾಗುವುದು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…