Mysore
17
scattered clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ಮೋದಿ: ನಾಲ್ಕು ಒಪ್ಪಂದಗಳಿಗೆ ಸಹಿ

ನವದೆಹಲಿ: ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸಹವರ್ತಿ ಲಾರೆನ್ಸ್‌ ವಾಂಗ್‌ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಡಿಜಿಟಲ್‌ ತಂತ್ರಜ್ಞಾನ, ಆರೋಗ್ಯ ಸಹಕಾರ, ಕೌಶಲ್ಯ ಸೇರಿದಂತೆ ಪ್ರಮುಖ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ಡಿಜಿಟಲ್‌ ತಂತ್ರಜ್ಞಾನದಲ್ಲಿ ಸಹಕರಿಸಲು ಭಾರತದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಸಿಂಗಾಪುರದ ಡಿಜಿಟಲ್‌ ಅಭಿವೃದ್ಧಿ ಮತ್ತು ಮಾಹಿತಿ ಸಚಿವಾಲಯದ ನಡುವೆ ಮೊದಲ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇನ್ನು ಭಾರತ-ಸಿಂಗಾಪುರ ಸೆಮಿಕಂಡಕ್ಟರ್‌ ಪರಿಸರ ವ್ಯವಸ್ಥೆಯ ಪಾಲುದಾರಿಕೆಯ ಕುರಿತಾದ ತಿಳುವಳಿಕಾ ಒಪ್ಪಂದ, ಆರೋಗ್ಯ ಮತ್ತು ವೈದ್ಯಕೀಯ ಸಹಕಾರಕ್ಕಾಗಿ ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮತ್ತೊಂದು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇನ್ನು ಶೈಕ್ಷಣಿಕ ಸಹಕಾರ ಮತ್ತು ಕೌಶಲ್ಯಾಭಿವೃದ್ಧಿಯ ಅಂತಿಮ ಒಪ್ಪಂದಕ್ಕೆ ಶಿಕ್ಷಣ ಸಚಿವಾಲಯ ಸಹಿ ಮಾಡಿದೆ.

ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಿಂಗಾಪುರ ಮತ್ತು ಏಷ್ಯನ್‌ ಪ್ರದೇಶಗಳೊಂದಿಗೆ ನಮ್ಮ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!