ನವದೆಹಲಿ: ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸಹವರ್ತಿ ಲಾರೆನ್ಸ್ ವಾಂಗ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಸಹಕಾರ, ಕೌಶಲ್ಯ ಸೇರಿದಂತೆ ಪ್ರಮುಖ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಡಿಜಿಟಲ್ ತಂತ್ರಜ್ಞಾನದಲ್ಲಿ ಸಹಕರಿಸಲು ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಸಿಂಗಾಪುರದ ಡಿಜಿಟಲ್ ಅಭಿವೃದ್ಧಿ ಮತ್ತು ಮಾಹಿತಿ ಸಚಿವಾಲಯದ ನಡುವೆ ಮೊದಲ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಇನ್ನು ಭಾರತ-ಸಿಂಗಾಪುರ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯ ಪಾಲುದಾರಿಕೆಯ ಕುರಿತಾದ ತಿಳುವಳಿಕಾ ಒಪ್ಪಂದ, ಆರೋಗ್ಯ ಮತ್ತು ವೈದ್ಯಕೀಯ ಸಹಕಾರಕ್ಕಾಗಿ ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮತ್ತೊಂದು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಇನ್ನು ಶೈಕ್ಷಣಿಕ ಸಹಕಾರ ಮತ್ತು ಕೌಶಲ್ಯಾಭಿವೃದ್ಧಿಯ ಅಂತಿಮ ಒಪ್ಪಂದಕ್ಕೆ ಶಿಕ್ಷಣ ಸಚಿವಾಲಯ ಸಹಿ ಮಾಡಿದೆ.
ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಿಂಗಾಪುರ ಮತ್ತು ಏಷ್ಯನ್ ಪ್ರದೇಶಗಳೊಂದಿಗೆ ನಮ್ಮ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…