Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ನಿಧನ

ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಚಂದ್ರನ್‌ ಅವರು, ತ್ರಿಶೂರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪ್ರೀತಿ, ಹಂಬಲ, ಭಕ್ತಿ ಸೇರಿದಂತೆ ಮುಂತಾದ ಪ್ರತಿಯೊಂದು ಭಾವನೆಯನ್ನು ತಮ್ಮ ಗಾಯನದ ಮೂಲಕ ಜನರನ್ನು ರಂಜಿಸುತ್ತಾ ಬಂದಿದ್ದರು.

ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 16,000ಕ್ಕೂ ಹೆಚ್ಚು ಹಾಡುಗಳಿಗೆ ತಮ್ಮ ಧ್ವನಿ ನೀಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ಪ್ರಸಿದ್ಧ ಧ್ವನಿಗಳಲ್ಲಿ ಒಂದಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಮಂದಾರ ಪುಷ್ಪವೂ ನೀನು, ಭೂಮಿ ತಾಯಾಣೆ ನೀ ಇಷ್ಟ ಕಣೆ, ಹಿಂದೂಸ್ತಾನವು ಎಂದೂ ಮರೆಯದ, ಕನ್ನಡ ನಾಡಿನ ಕರಾವಳಿ, ನನ್ನವರು ಯಾರೂ ಇಲ್ಲ. ಯಾರಿಗೆ ಯಾರೂ ಇಲ್ಲ. ಕಾಲ ಮತ್ತೊಮ್ಮೆ ನಮಗಾಗಿ ಬಂತು. ಹೀಗೆ ಹಲವಾರು ಕನ್ನಡದ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಜನಪ್ರಿಯತೆ ಗಳಿಸಿದ್ದರು.

Tags:
error: Content is protected !!