ಹೊಸದಿಲ್ಲಿ : 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಮಾಡಲು ಕಾಂಗ್ರೆಸ್ ತಂಡವೊಂದನ್ನು ರಚಿಸಿದೆ. ಇದು ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಮೇಲೆ ತೀವ್ರ ನಿಗಾ ವಹಿಸಲಿದೆ.
ಪರಿಷ್ಕರಣೆ ಕಾರ್ಯವಿಧಾನದ ಮೇಲೆ ನಿಗಾ ಇಡಲು ಆಯಾ ರಾಜ್ಯ ಕಾಂಗ್ರೆಸ್ ಘಟಕವು ತನ್ನ ಕಾರ್ಯಕರ್ತರನ್ನು ನೇಮಿಸಿದೆ. ಅವರು ದೈನಂದಿನ ಮತ್ತು ಸಾಪ್ತಾಹಿಕ ವರದಿಗಳನ್ನು ಮೇಲ್ವಿಚಾರಣೆ ಮಾಡಬೇಕು. ಆಗಸ್ಟ್ ನಲ್ಲಿ ಬಿಹಾರದಲ್ಲಿ ನಡೆದ ಪರಿಷ್ಕರಣೆಯ ವೇಳೆ ೬೫ ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಡಿಲೀಟ್ ಮಾಡಲಾಗಿತ್ತು. ಅದರಂತೆ ಈಗ ನಡೆಯುತ್ತಿರುವ ರಾಜ್ಯಗಳಲ್ಲಿ ಮತದಾರರು ತಮ್ಮ ನಮೂನೆಗಳನ್ನು ಭರ್ತಿ ಮಾಡಲು ಸಹಾಯ ಮಾಡುವಂತೆ ಕಾಂಗ್ರೆಸ್ ತನ್ನ ಸ್ಥಳೀಯ ಕಾರ್ಯಕರ್ತರಿಗೆ ಸೂಚಿಸಿದೆ.
ಇದನ್ನು ಓದಿ: Australian Open Badminton 2025 : ಲಕ್ಷ್ಯ ಸೇನ್‌ಗೆ ಚಿನ್ನದ ಪದಕ
ಚುನಾವಣಾ ಆಯೋಗದ ಈ ಪ್ರಕ್ರಿಯೆಯನ್ನು ವಿರೋಧಿಸುವ ಕಾಂಗ್ರೆಸ್, ಆಯಾ ರಾಜ್ಯ ಘಟಕಗಳಿಗೆ ಬೂತ್ ಮಟ್ಟದ ಏಜೆಂಟ್‌ಗಳನ್ನು ನೇಮಿಸಲು ಮತ್ತು ಬ್ಲಾಕ್ ಅಥವಾ ಮಂಡಲ ಮಟ್ಟದ ಕಾರ್ಯಕರ್ತರನ್ನು ನಿಯೋಜಿಸಲು ತಾಕೀತು ಮಾಡಿದೆ.
ನ.೧೮ರಂದು ಎಐಸಿಸಿ ಸಭೆಯಲ್ಲಿ ಪಕ್ಷದ ಕೆಲವು ಹಿರಿಯ ಕಾರ್ಯಕರ್ತರು ಸಾಂಸ್ಥಿಕ ಅಂತರ ಮತ್ತು ಸಾಕಷ್ಟು ಬಿಎಲ್‌ಎಗಳ ಕೊರತೆಯ ಸಮಸ್ಯೆಯನ್ನು ಪ್ರಸ್ತಾಪಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸವಾಲನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಹಂತಗಳಲ್ಲಿ ಪದಾಽಕಾರಿಗಳನ್ನು ನೇಮಿಸುವಂತೆಯೂ ಸೂಚಿಸಿದ್ದಾತಿ ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಉತ್ತರಪ್ರದೇಶ ಎಐಸಿಸಿ ಉಸ್ತುವಾರಿ ಅವಿನಾಶ್ ಪಾಂಡೆ, ಎಸ್‌ಐಆರ್‌ಅನ್ನು ಎದುರಿಸುವ ಕಾರ್ಯತಂತ್ರವನ್ನು ರಾಜ್ಯ ಮತ್ತು ಎಐಸಿಸಿ ನಾಯಕರೊಂದಿಗೆ ಚರ್ಚಿಸಲಾಗಿದೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದವರೆಗೆ ಸಕ್ರಿಯರಾಗಿ ಭಾಗವಹಿಸಲಿದ್ದಾರೆ ಎಂದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…