ಹೊಸದಿಲ್ಲಿ : ಬಿಹಾರದಲ್ಲಿ ಯಶಸ್ವಿಯಾಗಿ ನಡೆಸಿರುವ ಬೆನ್ನಲ್ಲೇ ದೇಶದ 9 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 12 ಕಡೆ ಮತದಾರ ಸಮಗ್ರ ಪರಿಷ್ಕರಣಿ ( SIR) ನಡೆಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮುಂದಿನ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಮೊದಲಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿ ಹೊಸದಾಗಿ ಮತದಾರರ ಪಟ್ಟಿ ರಚಿಸಲಾಗುವುದು ಎಂದು ತಿಳಿಸಿದರು.
ಇದರ ಮೊದಲ ಹಂತವಾಗಿ 2026 ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳು ಸೇರಿದಂತೆ ಸುಮಾರು 12 ರಾಜ್ಯಗಳು ಈ ಪಟ್ಟಿಯಲ್ಲಿದೆ. ಮುಂದಿನ ವರ್ಷ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಗಳಿಗೆ ಚುನಾವಣೆಗಳು ನಡೆಯಲಿದ್ದು, ಹಾಗಾಗಿ, ಈ ರಾಜ್ಯಗಳಲ್ಲಿ ಮತದಾರರ ಪಟ್ಟಿಗಳನ್ನು ನವೀಕರಿಸುವುದು ಆಯೋಗಕ್ಕೆ ಆದ್ಯತೆಯಾಗಿದೆ. ಇನ್ನು ಈ ಪ್ರಕ್ರಿಯೆಯಲ್ಲಿ, ಹೊಸ ಮತದಾರರನ್ನು ಸೇರಿಸಲಾಗುತ್ತದೆ ಮತ್ತು ಹಳೆಯ ಅಥವಾ ತಪ್ಪಾದ ಮಾಹಿತಿಯನ್ನು ತೆಗೆದುಹಾಕಲಾಗುತ್ತದೆ.
ಮತದಾರರ ಪಟ್ಟಿಯ ಪ್ಯಾನ್-ಇಂಡಿಯಾ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇತ್ತೀಚೆಗೆ ಬಿಹಾರದಲ್ಲಿ ಮುಕ್ತಾಯಗೊಂಡಿದೆ. ಅಲ್ಲಿ ಮುಂದಿನ ತಿಂಗಳು ವಿಧಾನಸಭಾ ಚುನಾವಣೆಗಳು ನಡೆಯಲಿವೆ. SIRನ ಎರಡನೇ ಹಂತದಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿರವೆ ಎಂದು ಚುನಾವಣಾ ಆಯೋಗ ತಿಳಿಸಿದರು.
ಇದನ್ನೂ ಓದಿ:-3 ಕೋಟಿ ಅಧಿಕ ವಂಚನೆ ಆರೋಪ : ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ ; ಹಾಸನದ ಗ್ರಾಮದಲ್ಲಿ ಘಟನೆ
ದೇಶದಲ್ಲಿ ಕೊನೆಯದಾಗಿ ವಿಶೇಷ ತೀವ್ರ ಪರಿಷ್ಕರಣೆಯನ್ನು 21 ವರ್ಷಗಳ ಹಿಂದೆ ಅಂದರೆ 2002 – 2004 ರ ನಡುವೆ ಮಾಡಲಾಗಿತ್ತು. ಇದರೊಂದಿಗೆ ಎಲ್ಲಾ ಅರ್ಹ ಮತದಾರರನ್ನು SIR ಗೆ ಸೇರಿಸಲಾಗುತ್ತದೆ ಮತ್ತು ಅನರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದ ಅವರು, ಚುನಾವಣೆಗೆ ಮೊದಲು SIR ನಡೆಸುವುದು ಅತ್ಯಂತ ಮುಖ್ಯ ಎಂದರು.
ಇದರೊಂದಿಗೆ ನಮ್ಮ BLO ಗಳು ಪ್ರತಿ ಮನೆಗೆ ಮೂರು ಬಾರಿ ಭೇಟಿ ನೀಡಿ ಮತದಾರರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಾರೆ ಎಂದ ಅವರು, SIR ಪ್ರಕ್ರಿಯೆಯನ್ನು ಮಾಡಬೇಕಾದ ರಾಜ್ಯಗಳಲ್ಲಿ, ಇಂದು ರಾತ್ರಿ 12 ಗಂಟೆಯಿಂದ ಮತದಾರರ ಪಟ್ಟಿಯನ್ನು ಸ್ಥಗಿತಗೊಳಿಸಲಾಗುವುದು ಘೋಷಿಸಿದರು.
ಆಯೋಗದ ಕಾನೂನಿನ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಅಗತ್ಯವಿದೆ. ಪ್ರತಿಯೊಂದು ರಾಜಕೀಯ ಪಕ್ಷವೂ ಪರಿಷ್ಕರಣೆ ನಡೆಸದ ಬಗ್ಗೆ ದೂರು ನೀಡಿವೆ. ಇಲ್ಲಿಯವರಗೆ ಎಂಟು ಬಾರಿ SIR ನಡೆಸಿದೆ. 2002-2004 ರಲ್ಲಿ ಕೊನೆಯದಾಗಿ SIR ನಡೆಸಲಾಗಿತ್ತು. ಎರಡು ದಶಕದ ಬಳಿಕ ಈಗ SIR ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಳೆದ 20 ವರ್ಷದ ಅವಧಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸಾಕಷ್ಟು ಮತದಾರರ ವಿಳಾಸ ಬದಲಾವಣೆಯಾಗಿರುತ್ತದೆ, ವಿದೇಶಿಗರು ಪಟ್ಟಿಯಲ್ಲಿ ಸೇರಿರುತ್ತಾರೆ. ಕೆಲವರು ಮರಣದ ಬಳಿಕವೂ ಪಟ್ಟಿಯಲ್ಲಿ ಹೆಸರು ಉಳಿದುಕೊಂಡಿರುತ್ತದೆ. ಇದನ್ನು ತೆರವು ಮಾಡಲು SIR ಅಗತ್ಯವಿದೆ ಎಂದು ಆಯೋಗದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಕರ್ನಾಟಕದಲ್ಲಿ ವೆರಿಫಿಕೇಷನ್ ಆಗುತ್ತಾ?
ಎಸ್ಐಆರ್ – ಫೇಸ್ 2 ಪ್ರಕ್ರಿಯೆ ಜಾರಿಗೊಳ್ಳಲಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕದ ಹೆಸರಿಲ್ಲ. ಬಹುಶಃ ಫೇಸ್ 3 ಅಡಿಯಲ್ಲಿ ಕರ್ನಾಟಕದಲ್ಲಿ ಈ ಪ್ರಕ್ರಿಯೆ ಜಾರಿಯಾಗಬಹುದು. ಇಲ್ಲವೇ, 2028ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯು ಪರಿಷ್ಕರಣೆಯಾಗಬಹುದು.
ಏನಿದು ವಿಶೇಷ ತೀವ್ರ ಪರಿಷ್ಕರಣೆ..?
ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮುಖ್ಯ ಉದ್ದೇಶವು ಮತದಾರರ ಪಟ್ಟಿಗಳನ್ನು ಸುಧಾರಿಸಲು ಮತ್ತು ಹೊಸ ಮತದಾರರನ್ನು ಸೇರಿಸಲು ಆಗಿದೆ. ಈ ಪ್ರಕ್ರಿಯೆಯಲ್ಲಿ ಹೆಸರುಗಳ ಪರಿಶೀಲನೆ, ಅಸ್ತಿತ್ವದಲ್ಲಿರುವ ಮತದಾರರ ಮಾಹಿತಿಯ ದೃಢೀಕರಣ ಹಾಗೂ ಅಗತ್ಯ ತಿದ್ದುಪಡಿಗಳನ್ನು ಒಳಗೊಂಡಿರುತ್ತದೆ. ಚುನಾವಣಾ ಆಯೋಗದ ಪ್ರಕಾರ, ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು, ನ್ಯಾಯಸಮ್ಮತವಾಗಿ ನಡೆಯುತ್ತದೆ. SIR ಮೂಲಕ ಮತದಾರರ ಪಟ್ಟಿಗಳಲ್ಲಿನ ದೋಷಗಳನ್ನು ಸರಿಪಡಿಸಿ, ಹೊಸ ಅರ್ಹ ಮತದಾರರನ್ನು ಸೇರಿಸುವ ಮೂಲಕ ಚುನಾವಣೆಗಳಲ್ಲಿ ಜನಸಾಮಾನ್ಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶವಾಗಿದೆ.
9 ರಾಜ್ಯಗಳು
ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ಗೋವಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್, ಕೇರಳ ಮತ್ತು ರಾಜಸ್ಥಾನ.
3 ಕೇಂದ್ರಾಡಳಿತ ಪ್ರದೇಶಗಳು
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಪುದುಚೇರಿ
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…