Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಬದರಿನಾಥದಲ್ಲಿ ಹಿಮಪಾತ: ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಪೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಅಧಿಕ ಬಾರ್ಡರ್‌ ರೋಡ್‌ ಆರ್ಗನೈಸೇಷನ್‌ನ ಕಾರ್ಮಿಕರು ಸಿಲುಕಿದ್ದು, ಇಲ್ಲಿಯವರೆಗೂ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಈಗಾಗಲೇ ರಕ್ಷಣೆ ಮಾಡಲಾದ ಕಾರ್ಮಿಕರನ್ನು ಹೆಲಿಕಾಪ್ಟರ್‌ ಮುಖಾಂತರ ಜೋಶಿ ಮಠದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಹಿಮದಡಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಸೇನಾ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಈ ಕುರಿತು ಉತ್ತರಾಖಂಡ್‌ನ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್‌ ಗೃಹ ಸಚಿವ ಅಮಿತ್‌ ಶಾ ಅವರು ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಕಾರ್ಮಿಕರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Tags: