ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಪೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಅಧಿಕ ಬಾರ್ಡರ್ ರೋಡ್ ಆರ್ಗನೈಸೇಷನ್‌ನ ಕಾರ್ಮಿಕರು ಸಿಲುಕಿದ್ದು, ಇಲ್ಲಿಯವರೆಗೂ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ಈಗಾಗಲೇ ರಕ್ಷಣೆ ಮಾಡಲಾದ ಕಾರ್ಮಿಕರನ್ನು ಹೆಲಿಕಾಪ್ಟರ್ ಮುಖಾಂತರ ಜೋಶಿ ಮಠದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಹಿಮದಡಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಸೇನಾ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಈ ಕುರಿತು ಉತ್ತರಾಖಂಡ್‌ನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ ಗೃಹ ಸಚಿವ ಅಮಿತ್ ಶಾ ಅವರು ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಕಾರ್ಮಿಕರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…