ದೇಶ- ವಿದೇಶ

ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಸೇನೆ ಟ್ಯಾಂಕ್‌ ಅಪಘಾತ; ಐವರು ಯೋಧರು ಸಾವು

ಲಡಾಖ್:‌ ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಇಂದು‌ ಭಾರೀ ದುರ್ಘಟನೆಯೊಂದು ಜರುಗಿದೆ.

ಇಂದು ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್‌ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ ಟಿ-72 ಟ್ಯಾಂಕ್‌ನಲ್ಲಿ ನದಿಯೊಂದನ್ನು ದಾಟುತ್ತಿದ್ದಾಗ ಹಠಾತ್‌ ಪ್ರವಾಹ ಉಂಟಾಗಿದ್ದು, ಐವರು ಯೋಧರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲೇಹ್‌ನಿಂದ 148 ಕಿ.ಮೀ ದೂರದಲ್ಲಿರುವ ಮಂದಿರ್‌ ಮೋರ್‌ ಬಳಿ ಬೆಳಿಗ್ಗೆ ೧ ಗಂಟೆ ಸುಮಾರಿಗೆ ಟ್ಯಾಂಕ್‌ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಸೇನಾ ಟ್ಯಾಂಕ್‌ ಅಪಘಾತಕ್ಕೀಡಾಗಿದ್ದು, ನದಿಯ ಆಳವಾದ ಭಾಗವನ್ನು ದಾಟುತ್ತಿದ್ದಾಗ ಸಿಲುಕಿಕೊಂಡಿತ್ತು. ಈ ವೇಳೆ ಏಕಾಏಕಿ ನೀರಿನ ಮಟ್ಟ ಏರಿದ್ದರಿಂದ ಸೈನಿಕರು ಕೊಚ್ಚಿಕೊಂಡು ಹೋಗಿದ್ದಾರೆ.

ಭಾರತದಲ್ಲಿ 2400 ಟಿ-72 ಟ್ಯಾಂಕ್‌ಗಳಿವೆ. ಭಾರತೀಯ ಸೇನೆಯು ಈ ಟ್ಯಾಂಕ್‌ಗಳನ್ನು ಬಹಳ ಹಿಂದಿನಿಂದಲೂ ಬಳಸುತ್ತಿದೆ. ಅಪಘಾತದ ಸಮಯದಲ್ಲಿ ಇತರ ಟ್ಯಾಂಕ್‌ಗಳು ಸಹ ಅಲ್ಲಿದ್ದವು. ಎಲ್ಲಾ ಐದು ಸೈನಿಕರ ಶವಗಳನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿಮ ಕರಗುವಿಕೆಯಿಂದ ನೀರಿನ ಮಟ್ಟ ಇದ್ದಕ್ಕಿದ್ದಂತೆ ಹೆಚ್ಚಾಗಿದೆ ಎಂದು ಊಹಿಸಲಾಗಿದ್ದು, ಶ್ಯೋಕ್‌ ಸಿಂಧೂ ನದಿಯ ಉಪನದಿಯಾಗಿದೆ.

ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಲಡಾಖ್‌ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

34 mins ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

49 mins ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

1 hour ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

1 hour ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

2 hours ago