ಶಿಮ್ಲಾ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿ ತುರ್ತಾಗಿ ಶಿಮ್ಲಾದ ಆಸ್ಪತ್ರೆಗೆ ದಾಖಲಾಸಲಾಗಿದೆ.
ಪ್ರಿಯಾಂಕ ಗಾಂಧಿ ಅವರೊಂದಿಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಸೋನಿಯಾ ಅವರಿಗೆ ಅಧಿಕ ರಕ್ತದೊತ್ತಡ ಕಂಡು ಬಂದ ಹಿನ್ನೆಲೆ ಶಿಮ್ಲಾದ ಆಸ್ಪತ್ರೆಗೆ ದಾಖಸಿಲಿ ಚಿಕಿತ್ಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಪಾಸಣೆಗಾಗಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ರಕ್ತದೊತ್ತಡ ಹೆಚ್ಚಾಗಿತ್ತು. ಸಂಪೂರ್ಣ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅಮನ್ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರು ಶಿಮ್ಲಾದ ಗಾಂಧಿ ಕುಟುಂಬದ ಖಾಸಗಿ ನಿವಾಸದಲ್ಲಿ ತಂಗಿದ್ದಾರೆ. ಅವರು ಭಾನುವಾರ ದೆಹಲಿಗೆ ಮರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ ದಿನಗಳಿಂದ ಸೋನಿಯಾ ಗಾಂಧಿ ಅವರಿಗೆ ವೈದ್ಯಕೀಯ ಚಿಕಿತ್ಸೆ ಸಾಮಾನ್ಯವಾಗಿದೆ. ಈ ಮೊದಲು ಫೆಬ್ರವರಿಯಲ್ಲೂ ಕೂಡ ಅವರು ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು.





