Mysore
25
overcast clouds
Light
Dark

ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ

ನವದೆಹಲಿ: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮರು ನೇಮಕ ಆಗಿದ್ದಾರೆ.

ಇಂದು (ಜೂನ್‌.8) ನವದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಗೌರವ್‌ ಗೊಗೋಯ್‌, ಕೆ. ಸುಧಾಕರನ್‌, ತಾರಿಕ್‌ ಅನ್ವರ್‌ ಸಮ್ಮತಿಸಿದರು.

ಇತ್ತ ಸೋನಿಯಾ ಗಾಂಧಿ ಅವರು ಸಂಸದೀಯ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡರೆ, ಅವರ ಮಗ ರಾಹುಲ್‌ ಗಾಂಧಿ ಅವರಿಗೆ ನೀಡಿರುವ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಂತಿಮ ನಿರ್ಧಾರವನ್ನು ಇನ್ನು ಪ್ರಕಟಿಸಿಲ್ಲ. ಶೀಘ್ರದಲ್ಲಿಯೇ ತಮ್ಮ ನಿರ್ಧಾರ ತಿಳಿಸುವುದಾಗಿ ವರಿಷ್ಠರಿಗೆ ತಿಳಿಸಿದ್ದಾರೆ.

ಇನ್ನು ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚುನಾವಣೆ ಬಗ್ಗೆ ಮಾತನಾಡಿದ ಸೋನಿಯಾ ಗಾಂಧಿ, ಈ ಚುನಾವಣೆ ಮೋದಿಗೆ ನೈತಿಕ ಮತ್ತು ರಾಜಕೀಯ ಸೋಲಾಗಿದೆ. ಹೀಗಿದ್ದರು ಭಾನುವಾರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದರು.

ಮೋದಿಗೆ ಸಂಸದೀಯ ವ್ಯವಸ್ಥೆ ಮೀರಿ ಕೆಲಸ ಮಾಡಲು ಅವಕಾಶ ಇಲ್ಲ. ಈ ಬಾರಿಯ ಚುನಾವಣೆಯಲ್ಲಿ ಮೋದಿ ಕೇವಲ ತಮ್ಮ ಹೆಸರಿನ ಮೂಲಕವೇ ಮತ ಕೇಳಿದ್ದಾರೆ. ರಾಹುಲ್‌ ಗಾಂಧಿಯ ಭಾರತ್‌ ಜೋಡೋ ಯಾತ್ರೆಯಿಂದ ಬಿಜೆಪಿ ಶಕ್ತಿ ಕುಸಿದಿದ್ದು, ನಮ್ಮ ಪಕ್ಷಕ್ಕೆ ಬಲ ತಂದಿದೆ ಎಂದು ಹೇಳಿದರು.