Mysore
24
scattered clouds

Social Media

ಬುಧವಾರ, 11 ಫೆಬ್ರವರಿ 2026
Light
Dark

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

sonia gandhi

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರಿಗೆ ಹೊಟ್ಟೆ ಸಂಬಂಧಿತ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಹಿಮಾಚಲ ಪ್ರದೇಶದಲ್ಲಿದ್ದಾಗ ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರು ಶಿಮ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಇದೀಗ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Tags:
error: Content is protected !!