Mysore
22
broken clouds

Social Media

ಶುಕ್ರವಾರ, 13 ನವೆಂಬರ್ 2026
Light
Dark

ಬೆಳ್ಳಿತೆರೆಗೆ ಸೋನಿಯಾ ಗಾಂಧಿ ಬದುಕಿನ ಕಥೆ! ಆತ್ಮಚರಿತ್ರೆ ಆಧರಿಸಿ ಸಿನಿಮಾ ಘೋಷಣೆ

sonia gandhi

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಇದೀಗ ಸಿನಿಮಾ ರೂಪದಲ್ಲಿ ಬರಲಿದೆ ಎಂದು ವರದಿಯಾಗಿದೆ.

ನವೆಂಬರ್‌ 10ರಂದು ಬಿಡುಗಡೆಯಾದ ‘ಬಿಲಾಂಗಿಂಗ್‌: ಎ ಜರ್ನಿ ಆಫ್‌ ಲವ್‌’ ಪುಸ್ತಕವನ್ನು ಆಧರಿಸಿ ಸಿನಿಮಾ ನಿರ್ಮಿಸುವುದಾಗಿ ತೆಲಂಗಾಣ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಜಗ್ಗಾ ರೆಡ್ಡಿ ಘೋಷಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಚಿತ್ರ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ನಾಯಕರು ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ಸಂಚಾಲಕ ಜೂಲಕಂತಿ ಆಂಜನೇಯಲು ಚಿತ್ರಕ್ಕಾಗಿ 2 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.

ಚಿತ್ರದ ನಿರ್ದೇಶಕರು ಹಾಗೂ ತಾರಾಬಳಗದ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Tags:
error: Content is protected !!