ನವದೆಹಲಿ: ನಮ್ಮ ದೇಶದ ವಿರುದ್ಧ ಪಾಕ್ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.400 ಕ್ಷಿಪಣಿ, ಬ್ರಹ್ಮೋಸ್ ನೆಲೆ ನಾಶವಾಗಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಚಂಡೀಗಢದಲ್ಲಿ ಪಾಕ್ ಶೆಲ್ ಮೇಲೆ ದಾಳಿ ಮಾಡಿರೋದು ಸುಳ್ಳು ಸುದ್ದಿಯಾಗಿದೆ. ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತೀಯ ಸೇನೆಯು ಕೇವಲ ಪಾಕ್‌ನ ಸೇನಾವಲಯಗಳನ್ನು ಗುರಿ ಮಾಡಿ ದಾಳಿ ಮಾಡಿದೆ. ನಮ್ಮ ದಾಳಿಯಿಂದ ಪಾಕಿಸ್ತಾನ ಸೇನೆಗೆ ಸಾಕಷ್ಟು ನಷ್ಟವಾಗಿದೆ ಎಂದು ಹೇಳಿದರು.
ಇನ್ನು ನಮ್ಮ ಸೇನೆಯು ಪಾಕ್‌ನ ಯಾವುದೇ ಮಸೀದಿಗಳನ್ನು ಟಾರ್ಗೆಟ್ ಮಾಡಿಲ್ಲ. ಕೇವಲ ಪಾಕ್ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ. ಎಲ್ಲಾ ಸಮಯದಲ್ಲೂ ನಮ್ಮ ಸೇನೆ ಅಲರ್ಟ್ ಆಗಿ ಇರಲಿದ್ದು, ಪಾಕ್ ದಾಳಿಗೆ ಪ್ರತೀದಾಳಿ ಮಾಡಲು ಸಿದ್ಧವಿದೆ ಎಂದು ಹೇಳಿದರು.
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…