ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ.
ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಸೌರವ್ ಗಂಗೂಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ಲಾರಿಯೊಂದು ಅವರ ಕಾರಿಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಸೌರವ್ ಗಂಗೂಲಿ ಅವರ ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ಬಳಿ ಸ್ವಲ್ಪ ಹೊತ್ತು ರಸ್ತೆಯಲ್ಲಿ ಕಾದ ನಂತರ ಗಂಗೂಲಿ ಬೇರೆ ವಾಹನದಲ್ಲಿ ಸಮಾರಂಭಕ್ಕೆ ತೆರಳಿದ್ದಾರೆ. ದಾರಿಯಲ್ಲಿ ಅಪಘಾತದಿಂದಾಗಿ ಆತಂಕಕ್ಕೊಳಗಾಗಿದ್ದರೂ ಸೌರವ್ ಗಂಗೂಲಿ ಅವರು ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ ಎನ್ನಲಾಗಿದೆ.





