ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದ್ದು, ವಿಚಾರಣೆಯನ್ನು ಮುಂದೂಡಿದೆ.
ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾ.ಅರವಿಂದ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ವಕೀಲರ ಅನುಪಸ್ಥಿತಿ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್.23ಕ್ಕೆ ಮುಂದೂಡಲಾಯಿತು.
ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಉಲ್ಟಾ ಹೊಡೆದಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮಾರ್ಚ್.23ಕ್ಕೆ ಮುಂದೂಡಿಕೆ ಮಾಡಿದೆ.





