Mysore
25
light rain

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.

ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಗ್ಲಾದೇಶ ಆಹ್ವಾನಿಸಿತ್ತು. ಆದರೆ ಅಂದು ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಕಾರಣ, ಲೋಕಸಭಾ ಸ್ಪೀಕರ್‌ ಅವರನ್ನು ಪ್ರತಿನಿಧಿಯಾಗಿ ಕಳುಹಿಸಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಸ್ಪೀಕರ್‌ ಭಾಗವಹಿಸುತ್ತಿರುವುದು ಭಾರತ ಮತ್ತು ಬಾಂಗ್ಲಾದೇಶದ ಜನರ ನಡುವಿನ ಆಳ ಮತ್ತು ಶಾಶ್ವತ ಸ್ನೇಹದ ಪ್ರತೀಕ. ಇದು ಎರಡು ರಾಷ್ಟ್ರಗಳು ಅನುಸರಿಸುತ್ತಿರುವ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಭಾರತದ ಬದ್ಧತೆಯಾಗಿದೆ ಎಂದು ಎಂಇಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Tags:
error: Content is protected !!