ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಗ್ಲಾದೇಶ ಆಹ್ವಾನಿಸಿತ್ತು. ಆದರೆ ಅಂದು ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಕಾರಣ, ಲೋಕಸಭಾ ಸ್ಪೀಕರ್ ಅವರನ್ನು ಪ್ರತಿನಿಧಿಯಾಗಿ ಕಳುಹಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಸ್ಪೀಕರ್ ಭಾಗವಹಿಸುತ್ತಿರುವುದು ಭಾರತ ಮತ್ತು ಬಾಂಗ್ಲಾದೇಶದ ಜನರ ನಡುವಿನ ಆಳ ಮತ್ತು ಶಾಶ್ವತ ಸ್ನೇಹದ ಪ್ರತೀಕ. ಇದು ಎರಡು ರಾಷ್ಟ್ರಗಳು ಅನುಸರಿಸುತ್ತಿರುವ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಭಾರತದ ಬದ್ಧತೆಯಾಗಿದೆ ಎಂದು ಎಂಇಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…