ನವದೆಹಲಿ: ನಾಳೆ (ಭಾನುವಾರ, ಜೂನ್.9)ರಂದು ಸಂಜೆ 7.15 ಗಂಟೆಗೆ ನವದೆಹಲಿಯ ರಾಷ್ಟ್ರಪತಿ ಭವನ ಸಭಾಂಗಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಲವಾರು ಗಣ್ಯರು, ವಿವಿಧ ರಾಷ್ಟ್ರಗಳ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್‌ನ ಮೊಹಮ್ಮದ್ ಮುಯಿಜ್ಜು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭೂತಾನ್‌ನ ತ್ಶೆರಿಂಗ್ ತೊಬ್ಗೇ, ನೇಪಾಳದ ಪುಷ್ಪ ಕಮಲ್ ದಹಲ್ ಪ್ರಚಂಡ ಮತ್ತು ವಾರಿಷಸ್‌ನ ಪ್ರವಿಂದ್ ಕುವಾರ್ ಜುಗ್ನಾಥ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವನ್ನು ನೀಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಪ್ರವಾಣ ವಚನ ಸವಾರಂಭದಲ್ಲಿ ಭಾಗವಹಿಸುವುದರ ಜೊತೆಗೆ, ಅದೇ ಸಂಜೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸುವ ಔತಣಕೂಟದಲ್ಲಿ ಈ ಎಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ.
ಒಟ್ಟಾರೆಯಾಗಿ ಪ್ರಧಾನಿ ಮೋದಿ ಪ್ರಮಾಣ ವಚನಕ್ಕೆ ದೇಶದ, ವಿದೇಶ ಸೇರಿದಂತೆ ಒಟ್ಟು 8 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ.
ಇನ್ನು ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸವಾರಂಭಕ್ಕೆ ವಿವಿಧ ರಾಷ್ಟ್ರಗಳ ಗಣ್ಯರು ಆಗಮಿಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ಅಂದು (ಭಾನುವಾರ) ಬೆಳಗ್ಗಿನಿಂದಲೇ ದೆಹಲಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ. ಕಮಾಂಡೋ, ಶ್ವಾನದಳ ಸೇರಿದಂತೆ ವಿವಿಧ ಶ್ರೇಣಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಶೇಷ ಆಹ್ವಾನಿತರಿಗೆ ನಿಗದಿಪಡಿಸಲಾಗಿರುವ ಫೈವ್-ಸ್ಟಾರ್ ಹೋಟೆಲ್‌ಗಳಲ್ಲಿಯೂ ಹೆಚ್ಚಿನ ಸೆಕ್ಯೂರಿಟಿ ನಿಯೋಜಿಸಲಾಗಿದೆ.
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…