ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ವೆಂಕಟೇಶ್ವರ್ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಕಾರ್ತಿಕ ಮಾಸದ ಮೊದಲ ಏಕಾದಶಿ ಹಿನ್ನೆಲೆಯಲ್ಲಿ ನಿನ್ನೆ ಶ್ರೀಕಾಕುಳಂನ ಕಾಶಿಬಗ್ಗು ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೇವಸ್ಥಾನಕ್ಕೆ ಏಕಾಏಕಿ ಲಕ್ಷಾಂತರ ಭಕ್ತರು ಆಗಮಿಸಿದ್ದರು. ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ, ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರಲ್ಲಿ 8 ಜನ ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ದೇವಸ್ಥಾನದ ಮೆಟ್ಟಿಲು ಹತ್ತುವಾಗ ಕಾಲ್ತುಳಿತ ಸಂಭವಿಸಿದೆ.





