ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಇನ್ನೂ 25 ಮಂದಿ ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಭಾನುವಾರ ತಿಳಿಸಿದ್ದಾರೆ.
ದುರಂತದ ಹಿನ್ನೆಲೆಯಲ್ಲಿ ತಡರಾತ್ರಿ ಘಟನಾ ಸ್ಥಳಕ್ಕೆ ಹಾಗೂ ಕೋಲ್ಕತ್ತಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ, ಪರಿಸ್ಥಿತಿಯನ್ನು ಪರಿಶೀಲಿಸಿದರು. ಗಾಯಾಳುಗಳ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದು, ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ‘ಗ್ರೂಪ್ ಡಿ’ ಶ್ರೇಣಿಯ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.
ಇದರೊಂದಿಗೆ ಗಾಯಗೊಂಡವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿಯೂ ತಿಳಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.
ದೇವಿಯ ದರ್ಶನಕ್ಕಾಗಿ ಆಗಮಿಸಿದ್ದ ಭಕ್ತರು ಕಾಲ್ತುಳಿತಕ್ಕೆ ಸಿಲುಕಿರುವ ಘಟನೆ ಹಲವು ಕುಟುಂಬಗಳನ್ನು ಶೋಕದಲ್ಲಿ ಮುಳುಗಿಸಿದೆ.
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…
ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ…