Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ಸಾವು

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ದೆಹಲಿ ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಅದಕ್ಕಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು.

ಆದರೆ ರೈಲು ಕೊಂಚ ತಡವಾಗಿ ನಿಲ್ದಾಣವನ್ನು ತಲುಪಿದವು. ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು.

ಇದೇ ವೇಳೆ ಪ್ರಯಾಗ್‌ರಾಜ್‌ಗೆ ಹೊರಟಿದ್ದ ವಿಶೇಷ ರೈಲು ಫ್ಲಾಟ್‌ ಫಾರ್ಮ್‌ಗೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಹೀಗಾಗಿ ಈ ಘಟನೆ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ತನಿಖೆಗೆ ಆದೇಶ ನೀಡಿದ್ದಾರೆ. ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

 

Tags:
error: Content is protected !!