Mysore
18
clear sky

Social Media

ಮಂಗಳವಾರ, 27 ಜನವರಿ 2026
Light
Dark

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಮೃತ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಮೃತರಲ್ಲಿ 11 ಮಹಿಳೆಯರು ಹಾಗು ನಾಲ್ಕು ಮಕ್ಕಳಿ ಸೇರಿದ್ದಾರೆ ಎಂದು ವರದಿಯಾಗಿದೆ.

ಇನ್ನು ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಕಾಲ್ತುಳಿತ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ಸಂತಾಪವಿದೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ ಅನೇಕರು ವಿಷಾಧ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.

 

Tags:
error: Content is protected !!