ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮೃತರಲ್ಲಿ 11 ಮಹಿಳೆಯರು ಹಾಗು ನಾಲ್ಕು ಮಕ್ಕಳಿ ಸೇರಿದ್ದಾರೆ ಎಂದು ವರದಿಯಾಗಿದೆ.
ಇನ್ನು ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕಾಲ್ತುಳಿತ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ಸಂತಾಪವಿದೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ವಿಷಾಧ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…