ದೇಶ- ವಿದೇಶ

ಮಹಾಕುಂಭಮೇಳದಲ್ಲಿ ಮತ್ತೊಂದು ದುರ್ಘಟನೆ: ಕಾಲ್ತುಳಿತಕ್ಕೆ 10 ಮಂದಿ ಸಾವು

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತವಾಗಿದೆ.

ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸೆಕ್ಟರ್-2ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲ್ತುಳಿತ ಸಂಭವಿಸಿದ ಪರಿಣಾಮ ಹಲವಾರು ಜನರು ಕುಟುಂಬಸ್ಥರಿಂದ ಬೇರ್ಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಇಂದು ಅಮೃತ ಸ್ನಾನ ಮಾಡುವ ನಿರೀಕ್ಷೆ ಮಾಡಲಾಗಿತ್ತು. ಆದರೆ ಕಾಲ್ತುಳಿತ ಸಂಭವಿಸಿದ ಪರಿಣಾಮ ಜನತೆ ತೀವ್ರ ಆತಂಕಕ್ಕೀಡಾಗಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಯೋಗಿ ಆದಿತ್ಯನಾಥ್‌ ಅವರು, ಸಂಗಮದ ಎಲ್ಲಾ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ. ನೀವು ಇರುವ ಗಂಗಾ ಮಾತೆಯ ಘಾಟ್‌ ಬಳಿಯೇ ಸ್ನಾನ ಮಾಡಿ. ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ ಎಂದು ವಿನಂತಿ ಮಾಡಿದ್ದಾರೆ.

ಆರೋಗ್ಯ ಸಮಸ್ಯೆ ಇರುವವರು ಬಹಳ ದೂರ ನಡೆಯಬೇಡಿ. ಯಾವುದೇ ಘಾಟ್‌ನಲ್ಲಿ ಸ್ನಾನ ಮಾಡಿದರೂ ಅದು ಗಂಗಾ ನದಿಯ ನೀರು. ಮೌನಿ ಅಮಾವಾಸ್ಯೆ ಗಂಗಾ ಸ್ನಾನ ಪುಣ್ಯ ಪ್ರಾಪ್ತಿ ಮಾಡಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜನಸ್ತೋಮ ಇರುವ ಹಿನ್ನೆಲೆ ಜನರು ಸಂಯಮದಿಂದ ವರ್ತಿಸಿ ಎಂದು ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

37 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

1 hour ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

2 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

2 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

2 hours ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago