karuru tamil actor vijay
ಕರೂರು : ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು ಸೇರಿದಂತೆ ಸುಮಾರು 31ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಸಾವಿನ ಸಂಖ್ಯೆ ಹೇರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿಗದಿತ ಸಮಯಕ್ಕಿಂತ 7 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದರು. ಈ ವೇಳೆ ಜನಸಂದಣಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
ಇದನ್ನೂ ಓದಿ:-ವಿಜಯ್ ರ‍್ಯಾಲಿ ವೇಳೆ ಕಾಲ್ತುಳಿತ ದುರಂತಕ್ಕೆ ಮೋದಿ ಸಂತಾಪ : ಕರೂರಿಗೆ ಸ್ಟಾಲಿನ್ ಭೇಟಿ ಸಾಧ್ಯತೆ
ಕಾಲ್ತುಳಿತದ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಹಲವು ಮಕ್ಕಳು ಕಾಣೆಯಾಗಿವೆ ಎಂದು ವರದಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವಂತೆ ಕೇಳಿಕೊಂಡರು.
ಕರೂರಿನಲ್ಲಿ ನಡೆದ ತಮ್ಮ ರ‍್ಯಾಲಿಯಲ್ಲಿ ಜನರು ಪ್ರಜ್ಞೆ ತಪ್ಪಿದಾಗ “ಪೊಲೀಸರೇ, ದಯವಿಟ್ಟು ಸಹಾಯ ಮಾಡಿ” ಎಂದು ವಿಜಯ್ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “ಯಾರೂ ಗಾಬರಿಯಾಗಬೇಡಿ, ಈಗ ಆ್ಯಂಬುಲೆನ್ಸ್ ಬರುತ್ತದೆ” ಎಂದು ಅವರು ಮೈಕ್ನಲ್ಲಿ ಹೇಳಿದ್ದಾರೆ. ಈ ವೇಳೆ ಅರ್ಧಕ್ಕೆ ತಮ್ಮ ಭಾಷಣವನ್ನು ನಿಲ್ಲಿಸಿದ ವಿಜಯ್, ಉಸಿರಾಟದ ತೊಂದರೆ ಅನುಭವಿಸುತ್ತಿರುವ ಜನರಿಗೆ ನೀರು ವಿತರಿಸಲು ಮತ್ತು ಆಂಬ್ಯುಲೆನ್ಸ್ ಸೇವೆಗಳನ್ನು ಸಂಘಟಿಸಲು ಮುಂದಾದರು. ಅಗತ್ಯವಿರುವವರನ್ನು ತಲುಪಲು ತುರ್ತು ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವಂತೆ ತಮ್ಮ ಬೆಂಬಲಿಗರನ್ನು ಅವರು ಒತ್ತಾಯಿಸಿದರು.
ಅಸ್ವಸ್ಥರಾಗಿರುವವರಿಗೆ ಸಹಾಯ ಮಾಡಲು ನೀರಿನ ಬಾಟಲಿಗಳನ್ನು ವಿತರಿಸಲಾಯಿತು ಮತ್ತು ವೈದ್ಯಕೀಯ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಪ್ರಜ್ಞೆ ತಪ್ಪಿದ ಹಲವಾರು ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…