Mysore
18
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತ: 80ಕ್ಕೂ ಹೆಚ್ಚು ಸಾವು

ಉತ್ತರ ಪ್ರದೇಶ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 80ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ನಡೆದಿದೆ.

ಹತ್ರಾಸ್‌ ಜಿಲ್ಲೆಯ ಮೋಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಇಥಹಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಆಗ್ರಾ ಎಡಿಜಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸ್ಥಳೀಯರು, ಧಾರ್ಮಿಕ ಗುರುವೊಬ್ಬರು ಧಾರ್ಮಿಕ ಸಭೆಯಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ. ಬಯಲಿನಲ್ಲಿ ಹಾಕಲಾಗಿದ್ದ ಟೆಂಟ್‌ನೊಳಗೆ ಗಾಳಿಯಾಡಲು ಎಲ್ಲೂ ರಂಧ್ರಗಳನ್ನು ಬಿಟ್ಟಿರಲಿಲ್ಲ. ಹಾಗಾಗಿ ವಿಶಾಲವಾದ ಟೆಂಟ್‌ನೊಳಗೆ ಜನ ಪ್ರವೇಶಿಸಿದ ಕೆಲವೇ ನಿಮಿಷಗಳಲ್ಲಿ ಅಲ್ಲಿ ಆಮ್ಲಜನಕ ಕೊರತೆಯುಂಟಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!