Mysore
27
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ನಟ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

karuru tamil actor vijay

ಚೆನ್ನೈ : ತಮಿಳು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಕರೂರ್ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಇದರಲ್ಲಿ 9 ಮಕ್ಕಳು ಮತ್ತು 17 ಮಹಿಳೆಯರು ಸೇರಿದ್ದಾರೆ.

50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕದಲ್ಲಿ ನೆರೆ; ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಆಗ್ರಹ

ಘಟನೆಯಲ್ಲಿ ಮೃತಪಟ್ಟವರ ಪೈಕಿ 35 ಮಂದಿ ಮೃತದೇಹಗಳ ಗುರುತು ಪತ್ತೆಯಾಗಿದೆ. ಗುರುತು ಪತ್ತೆಯಾದವರಲ್ಲಿ ಕರೂರು ಜಿಲ್ಲೆಯವರು 28 ಮಂದಿ, ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಗಳ ತಲಾ ಇಬ್ಬರು, ಸೇಲಂ ಜಿಲ್ಲೆಯ ಒಬ್ಬರ ಗುರುತು ಪತ್ತೆಯಾಗಿದೆ. ಉಳಿದ 4 ಶವಗಳನ್ನು ಗುರುತಿಸುವ ಕಾರ್ಯವನ್ನು ಸ್ಥಳೀಯ ಪೊಲೀಸರು ಮಾಡುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರೂರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ 50 ಮಂದಿ, ಕರೂರಿನ ಖಾಸಗಿ ಆಸ್ಪತ್ರೆಗಳಲ್ಲಿ 61 ಮಂದಿ ಸೇರಿ ಒಟ್ಟು 111 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದ ಎಡಿಜಿಪಿ ಡೇವಿಡ್ ಸನ್ ದೇವರ್ಶಿತಮ್ ಮಾತನಾಡಿ, 10,000 ಜನ ಸೇರುತ್ತಾರೆ ಅಂತ ಅನುಮತಿ ಪಡೆದಿದ್ದರು. ಹೀಗಾಗಿ 116 ಸ್ಥಳೀಯ ಪೊಲೀಸರೊಂದಿಗೆ ಹೆಚ್ಚುವರಿಯಾಗಿ 500 ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ದುರಂತಕ್ಕೆ ಕಾರಣಗಳನ್ನು ಪಟ್ಟಿ ಮಾಡಿದ್ದೇವೆ ಎಂದು ತಿಳಿಸಿದರು.

Tags:
error: Content is protected !!