karuru tamil actor vijay
ಚೆನ್ನೈ : ತಮಿಳು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಕರೂರ್ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಇದರಲ್ಲಿ 9 ಮಕ್ಕಳು ಮತ್ತು 17 ಮಹಿಳೆಯರು ಸೇರಿದ್ದಾರೆ.
50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:-ಕಲ್ಯಾಣ ಕರ್ನಾಟಕದಲ್ಲಿ ನೆರೆ; ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಆಗ್ರಹ
ಘಟನೆಯಲ್ಲಿ ಮೃತಪಟ್ಟವರ ಪೈಕಿ 35 ಮಂದಿ ಮೃತದೇಹಗಳ ಗುರುತು ಪತ್ತೆಯಾಗಿದೆ. ಗುರುತು ಪತ್ತೆಯಾದವರಲ್ಲಿ ಕರೂರು ಜಿಲ್ಲೆಯವರು 28 ಮಂದಿ, ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಗಳ ತಲಾ ಇಬ್ಬರು, ಸೇಲಂ ಜಿಲ್ಲೆಯ ಒಬ್ಬರ ಗುರುತು ಪತ್ತೆಯಾಗಿದೆ. ಉಳಿದ 4 ಶವಗಳನ್ನು ಗುರುತಿಸುವ ಕಾರ್ಯವನ್ನು ಸ್ಥಳೀಯ ಪೊಲೀಸರು ಮಾಡುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರೂರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ 50 ಮಂದಿ, ಕರೂರಿನ ಖಾಸಗಿ ಆಸ್ಪತ್ರೆಗಳಲ್ಲಿ 61 ಮಂದಿ ಸೇರಿ ಒಟ್ಟು 111 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಎಡಿಜಿಪಿ ಡೇವಿಡ್ ಸನ್ ದೇವರ್ಶಿತಮ್ ಮಾತನಾಡಿ, 10,000 ಜನ ಸೇರುತ್ತಾರೆ ಅಂತ ಅನುಮತಿ ಪಡೆದಿದ್ದರು. ಹೀಗಾಗಿ 116 ಸ್ಥಳೀಯ ಪೊಲೀಸರೊಂದಿಗೆ ಹೆಚ್ಚುವರಿಯಾಗಿ 500 ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ದುರಂತಕ್ಕೆ ಕಾರಣಗಳನ್ನು ಪಟ್ಟಿ ಮಾಡಿದ್ದೇವೆ ಎಂದು ತಿಳಿಸಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…