ದೇಶ- ವಿದೇಶ

ಕಾಲ್ತುಳಿತ ದುರಂತ | ನಟ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ

ಚೆನ್ನೈ : ತಮಿಳುನಾಡು ರಾಜ್ಯದಲ್ಲಿ ಭೀಕರ ಘಟನೆಗೆ ಕಾರಣವಾಗಿರುವ ಕರೂರು ಕಾಲ್ತುಳಿತ ಪ್ರಕರಣಕ್ಕೆ ಕಾರಣೀಭೂತರೆನ್ನಲಾದ ಚಿತ್ರನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ.

ಕಾಲ್ತುಳಿತಕ್ಕೆ ನಟ ವಿಜಯ್‌ ಅವರೇ ಕಾರಣ ಎಂದು ಆರೋಪಿಸಿರುವ ಡಿಎಂಕೆ ನಾಯಕರು ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ರಾತ್ರಿಯೇ ತುರ್ತಾಗಿ ಕರೂರ್‌ಗೆ ಆಗಮಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದು ಎಂದಿಗೂ ಮರುಕಳಿಸಬಾರದು ಎಂದು ಭಾವುಕರಾಗಿದ್ದಾರೆ.

ವಿಜಯ್‌ ಅವರನ್ನು ಬಂಧಿಸುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಾನು ನಿಮ ಪ್ರಶ್ನೆಗೆ ರಾಜಕೀಯವಾಗಿ ಉತ್ತರಿಸಲು ಸಾಧ್ಯವಿಲ್ಲ. ಇಷ್ಟು ಜನರ ಸಾವು ನನ್ನನ್ನು ಕುಗ್ಗಿಸಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಈ ಪ್ರಕರಣದ ತನಿಖೆಗೆ ನಿವೃತ್ತ ಹೈಕೋರ್ಟ್‌ ನ್ಯಾಯಾಧೀಶರಾದ ಅರುಣಾ ಜಗತೀಸನ್‌ ನೇತೃತ್ವದ ಏಕವ್ಯಕ್ತಿ ಆಯೋಗ ರಚಿಸಲಾಗಿದೆ. ಆಯೋಗದ ವರದಿ ಆಧರಿಸಿ ಸಂಭಾವ್ಯ ಬಂಧನ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:-ನಟ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

ಟಿವಿಕೆ ಕಾರ್ಯಕ್ರಮದ ಆಯೋಜಕರು ಕೇವಲ 10000 ಜನರು ರ್ಯಾಲಿಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದರು, ಆದರೆ 50,000 ರಿಂದ 1 ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ತಮಿಳುನಾಡು ಪೊಲೀಸರು ವಿಧಿಸಿದ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಜೀವಗಳಿಗೆ ಅಪಾಯವನ್ನುಂಟು ಮಾಡಲಾಗಿದೆ.

ಕಳೆದುಹೋದ ಪ್ರತಿಯೊಂದು ಜೀವಕ್ಕೂ ವಿಜಯ್‌ ಜವಾಬ್ದಾರನಾಗಿರುತ್ತಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಡಿಎಂಕೆ ವಕ್ತಾರ ಐಟಿ ವಿಭಾಗದ ಕಾರ್ಯದರ್ಶಿ ಸೇಲಂ ಧರಣಿಧರನ್‌ ಟ್ವಿಟರ್‌ ವೀಡಿಯೊದಲಿ ಒತ್ತಾಯಿಸಿದ್ದಾರೆ. ಎಫ್‌ಐ ಆರ್‌ ದಾಖಲು: ಏತನಧ್ಯೆ, ಕರೂರು ಪಟ್ಟಣ ಪೊಲೀಸರು ಟಿವಿಕೆ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್‌ ಸೇರಿದಂತೆ ಹಲವರ ವಿರುದ್ಧ ಬಿಎನ್‌ಎಸ್‌‍ನ ಸೆಕ್ಷನ್‌ 109, 110, 125ಬಿ, 223ರಡಿ ಎಫ್‌ಐಆರ್‌ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ಸೆಕ್ಷನ್‌ 109 ಮತ್ತು 110 ಕ್ರಮವಾಗಿ ಕೊಲೆ ಯತ್ನ ಮತ್ತು ಅಪರಾಧಿಕ ನರಹತ್ಯೆಗೆ ಯತ್ನಿಸುವ ಪ್ರಕರಣಗಳಾಗಿವೆ. ಸೆಕ್ಷನ್‌ 125 ದುಡುಕಿನ ಅಥವಾ ನಿರ್ಲಕ್ಷ್ಯದ ವರ್ತನೆಯ ಮೂಲಕ ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಉಲ್ಲೇಖಿಸುತ್ತದೆ. ಸೆಕ್ಷನ್‌ 223 ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶವನ್ನು ಪಾಲಿಸದಿದ್ದಕ್ಕೆ ಸಂಬಂಧಿಸಿದ್ದಾಗಿದೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

5 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

6 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

7 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

7 hours ago