ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನಡೆಸಿದ್ದ ರಾಜಕೀಯ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಇದೇ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳ ಚಿಕಿತ್ಸೆಗಾಗಿ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:-ನವೆಂಬರ್.14ಕ್ಕೆ ಬಿಡುಗಡೆಯಾಗಲಿದೆ ‘ಸಿಂಪಲ್’ ಸುನಿ ನಿರ್ದೇಶನದ ‘ಗತವೈಭವ’
ಇನ್ನು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಟ ವಿಜಯ್ ತಲಾ 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.





